ಕಳೆದ 24 ಗಂಟೆಗಳಲ್ಲಿ 10,488 ಹೊಸ ಪ್ರಕರಣಗಳು ಪತ್ತೆ..!
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 10,488 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
313 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,45,10,413 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,65,662 ಕ್ಕೆ ತಲುಪಿದೆ.
ಭಾರತದಲ್ಲಿ ಚೇತರಿಕೆಯ ಪ್ರಮಾಣವು ಪ್ರಸ್ತುತ 98.28% ರಷ್ಟಿದೆ, ಇದು ಮಾರ್ಚ್ 2020 ರಿಂದ ಅತ್ಯಧಿಕವಾಗಿದೆ.
ಒಟ್ಟು ಗುಣಮುಖರ ಸಂಖ್ಯೆ 3,39,22,037 ಕ್ಕೆ ತಲುಪಿದೆ.
ಇನ್ನು ದೇಶದಲ್ಲಿ ಇನ್ನೂ ಸಕ್ರಿಯ ಪ್ರಕರಣಗಳ ಸಂಖ್ಯೆ 1,22,714 ಕ್ಕೆ ಇಳಿಕೆಯಾಗಿದೆ.
ಭಾರತದಲ್ಲಿ ಒಟ್ಟು 1,16,50,55,210 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.