ಕಳೆದ 24 ಗಂಟೆಗಳಲ್ಲಿ 13,058 ಕೇಸ್ ಪತ್ತೆ – 3ನೇ ಅಲೆಯಿಂದ ಭೀತಿಯಿಂದ ಮುಕ್ತವಾಯ್ತ ಭಾರತ..?
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಅಬ್ಬರ ತಗ್ಗಿದ್ದು, ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿದಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 13,058 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 164 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಾದ್ಯಂತ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,40,94,373ಕ್ಕೆ, ಸೋಂಕಿನಿಂದ ಕೊನೆಯುಸಿರೆಳೆದಿರುವವರ ಸಂಖ್ಯೆ 4,52,454ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 19,470 ಜನರು ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 3,34,58,801 ಕ್ಕೆ ತಲುಪಿಸಿದೆ. ದೇಶದಲ್ಲಿನ್ನೂ 1,83,118 ಕೋವಿಡ್ ಸಕ್ರಿಯ ಪ್ರಕರಣಗಳಿವೆ.