ರಾಜ್ಯದಲ್ಲಿ ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 1,301 ಮಂದಿಗೆ ಸೋಂಕು
ಬೆಂಗಳೂರು: ರಾಜ್ಯದಲ್ಲಿ 1,301 ಕೊರೋನಾ ಪ್ರಕರಣಗಳು ವರದಿಯಾಗಿದ್ದು , ಸೋಂಕಿತರ ಸಂಖ್ಯೆ 29,44,764ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 17 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ 37,248ಕ್ಕೆ ಏರಿಕೆಯಾಗಿದೆ.
ಇಂದು 1,614 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,88,520ಕ್ಕೆ ಏರಿಕೆಯಾಗಿದೆ.
ಇನ್ನು 18,970 ಸಕ್ರೀಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 386 ಮಂದಿಗೆ ಸೋಂಕು ದೃಢಪಟ್ಟಿದ್ದು, ನಗರದಲ್ಲಿ ಸೋಂಕಿತರ ಸಂಖ್ಯೆ 12,36,615ಕ್ಕೆ ಏರಿಕೆಯಾಗಿದೆ. 2 ಮಂದಿ ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 44,658 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 496 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ವೈರಸ್ ನ ಸೋಂಕಿತರ ಸಂಖ್ಯೆ 3,26,03,188 ಕ್ಕೆ ಏರಿಕೆಯಾಗಿದೆ.
ಇದರೊಂದಿಗೆ ದೇಶದಲ್ಲಿ ಈವರೆಗೆ 3.18 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಚೇತರಿಕೆ ಪ್ರಮಾಣ ಶೇ 97.60ರಷ್ಟಿದೆ.
ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 4,36,861 ಕ್ಕೆ ಏರಿಕೆಯಾಗಿದೆ.
ಪ್ರಸ್ತುತ 3,44,899 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ.