ಕೋವಿಡ್ ರಿಪೋರ್ಟ್ ರಾಜ್ಯದಲ್ಲಿಂದು 1189 ಹೊಸ ಪ್ರಕರಣಗಳು ಪತ್ತೆ..!
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೋವಿಡ್ ಸೋಂಕಿನ ಪ್ರಮಾಣ ತಗ್ಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1189 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 22 ಜನರು ಸಾವನ್ನಪ್ಪಿದ್ದಾರೆ.
1456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2880889 ಕ್ಕೆ ತಲುಪಿದೆ. ಇನ್ನು ರಾಜ್ಯದಲ್ಲಿ ಸದ್ಯ 20556 ಸಕ್ರಿಯ ಪ್ರಕರಣಗಳು ಇವೆ.
ಭಾರತದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದ್ದು, ಕಳೆದ 24 ತಾಸುಗಳ ಅವಧಿಯಲ್ಲಿ 30,948 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 403 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,24,24,234ಕ್ಕೆ ತಲುಪಿದೆ. ಸಾವಿನ ಸಂಖ್ಯೆ 4,34,367ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 38,487 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,16,36,469ಕ್ಕೆ ತಲುಪಿದೆ.
ದೇಶದಲ್ಲಿನ್ನೂ 3,53,398 ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.