ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 13,451 ಕೇಸ್ ಪತ್ತೆ, 585 ಸಾವು
ನವದೆಹಲಿ : ದೇಶದಲ್ಲಿ ದಿನೇ ದಿನೇ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿಕೆಯಾಗ್ತಿದೆ. ಸಮಾಧಾನಕರ ಸಂಗತಿಯಂದ್ರೆ ಸುಮಾರು 10 – 15 ದಿನಗಳಿಂದ ದೈನಂದಿನ ಕೇಸ್ ಗಳ ಸಂಖ್ಯೆ 20 ಸಾವಿರದ ಒಳಗಿದೆ. ಆದ್ರೆ ಸಾವಿನ ಸಂಖ್ಯೆ ಏರಿಕೆಯಾಗ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 13,451 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಅಲ್ಲದೆ 585 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,42,15,653 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,55,653 ಕ್ಕೆ ತಲುಪಿದೆ.
ಇನ್ನು ದೇಶದಲ್ಲಿ ಇನ್ನೂ ಸಕ್ರಿಯ ಪ್ರಕರಣಗಳ ಸಂಖ್ಯೆ 1,62,661 ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಪ್ರಮಾಣ ಒಟ್ಟು ಸೋಂಕಿತರ ಪ್ರಮಾಣಕ್ಕೆ ಹೋಲಿಸಿದರೆ ಶೇ 0.48 ರಷ್ಟಿದ್ದು, ಗುಣಮುಖರಾದವರ ಪ್ರಮಾಣ ಶೇ 98.19ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ 15, 951 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,35,83, 318 ಕ್ಕೆ ತಲುಪಿದೆ.









