ದೇಶದಲ್ಲಿ ನಿನ್ನೆ 6,358 ಕೋವಿಡ್ ಪ್ರಕರಣ ದೃಢ : 653 ಕ್ಕೆ ಏರಿದ ಒಮಿಕ್ರಾನ್ ಸಂಖ್ಯೆ
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೇನೋ ದಿನೇ ದಿನೇ ಕಡಿಮೆಯಾಗ್ತಿದೆ. ಆದ್ರೆ ಇದು ಸಮಾಧಾನಕರ ಸಂಗತಿಯೇನಲ್ಲ..
ಯಾಕಂದ್ರೆ ಕೊರೊನಾ ವೈರಸ್ನ ರೂಪಾಂತರಿ ತಳಿ ಓಮೈಕ್ರಾನ್ ಸೋಂಕು ಪ್ರಕರಣಗಳು ದೇಶದಲ್ಲಿ ಏರಿಕೆಯಾಗ್ತಲೇ ಇದೆ.. ದೇಶದಲ್ಲಿ ಒಟ್ಟು 653 ಓಮೈಕ್ರಾನ್ ಪ್ರಕರಣಗಳು ದಾಖಲಾಗಿವೆ. ಭಾರತದಲ್ಲಿ ಪ್ರತಿ ಮೂರು ದಿನಗಳಿಗೆ ಒಮ್ಮೆ ಒಮಿಕ್ರಾನ್ ಪ್ರಕರಣಗಳು ದುಪ್ಪಟ್ಟಾಗ್ತಿವೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.. ಇದೇ ಅವಧಿಯಲ್ಲಿ 186 ಮಂದಿ ಒಮಿಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ..
ಅಂದ್ಹಾಗೆ ದೇಶದದಲ್ಲಿ ಕಳೆದ 24 ಗಂಟೆಗಳಲ್ಲಿ 6,358 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ.. ನಿನ್ನೆ 315 ಮಂದಿ ಮಹಾಮಾರಿಯಿಂದ ಉಸಿರು ನಿಲ್ಲಿಸಿದ್ದಾರೆ.. ಒಟ್ಟು ಸಾವಿನ ಸಂಖ್ಯೆ 4,80,290 ಕ್ಕೆ ತಲುಪಿದೆ. ಇದೇ ಅವಧಿಯಲ್ಲಿಯೇ 6,450 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ..
ದೇಶದಲ್ಲಿ ಈ ವರೆಗೆ 3,47,99,691 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 75,456 ಸಕ್ರಿಯ ಪ್ರಕರಣಗಳು ಭಾರತದಲ್ಲಿವೆ.








