ತಗ್ಗುತ್ತಿದೆ ಕೋವಿಡ್ ಕೇಸ್ ಗಳು , ಆದ್ರೆ ಹೆಚ್ಚುತ್ತಲೇ ಒಮಿಕ್ರಾನ್ ಸಂಖ್ಯೆ
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೇನೋ ದಿನೇ ದಿನೇ ಕಡಿಮೆಯಾಗ್ತಿದೆ. ಆದ್ರೆ ಇದು ಸಮಾಧಾನಕರ ಸಂಗತಿಯೇನಲ್ಲ.. ಯಾಕಂದ್ರೆ ಕೊರೊನಾ ವೈರಸ್ನ ರೂಪಾಂತರಿ ತಳಿ ಓಮೈಕ್ರಾನ್ ಸೋಂಕು ಪ್ರಕರಣಗಳು ದೇಶದಲ್ಲಿ ಏರಿಕೆಯಾಗ್ತಲೇ ಇದೆ.. ದೇಶದಲ್ಲಿ ಒಮಿಕ್ರಾನ್ ಸೋಂಕು ಪ್ರಕರಣ 358 ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಪ್ರತಿ ಮೂರು ದಿನಗಳಿಗೆ ಒಮ್ಮೆ ಒಮಿಕ್ರಾನ್ ಪ್ರಕರಣಗಳು ದುಪ್ಪಟ್ಟಾಗ್ತಿವೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ..
ಅಂದ್ಹಾಗೆ ದೇಶದದಲ್ಲಿ ಕಳೆದ 24 ಗಂಟೆಗಳಲ್ಲಿ 6,650 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ.. ನಿನ್ನೆ 374 ಮಂದಿ ಮಹಾಮಾರಿಯಿಂದ ಉಸಿರು ನಿಲ್ಲಿಸಿದ್ದಾರೆ.. ಒಟ್ಟು ದೇಶದದಲ್ಲಿ 3,47,72,626 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಒಟ್ಟು ಸಾವಿನ ಸಂಖ್ಯೆ 4,79,133 ಕ್ಕೆ ತಲುಪಿದೆ. ಇದೇ ಅವಧಿಯಲ್ಲಿಯೇ 7,051 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.. ದೇಶದಲ್ಲಿ ಈ ವರೆಗೆ 3,42,15,977 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 77,516 ಸಕ್ರಿಯ ಪ್ರಕರಣಗಳು ಭಾರತದಲ್ಲಿವೆ.