ಎಚ್ಚರ… ಎಚ್ಚರ… ಹೋಂ ಐಸೋಲೇಷನ್ ನಲ್ಲಿದ್ದವರು ಹೊರಗಡೆ ಓಡಾಡುತ್ತಿದ್ದಾರೆ..!
ಚಿಕ್ಕಮಗಳೂರು : ದೇಶದಲಲ್ಲಿ ಹಾಗೂ ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಹಿಂದೆಂದೆಗಗಿಂತಲೂ ಭೀಕರವಾಗಿದ್ದು, ಜನರ ಸಾವಿನ ಸಂಖ್ಯೆ , ಸಸೋಂಕಿತರ ಸಂಖ್ಯೆ, ಸೋಂಕು ಹರಡುತ್ತಿರುವ ಪ್ರಮಾಣ, ವೇಗ ಹೆಚ್ಚಾಗ್ತಲೇ ಇದೆ.. ಈ ನಡುವೆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಬೆಡ್ ಕೊರತೆ ಸಮಸ್ಯೆ ಉಂಟಾಗಿದೆ. ಮತ್ತೊಂದು ಆಘಾಕಾರಿ ಸಂಗತಿ ಎಂದ್ರೆ ಹೋಂ ಐಸೋಲೇಷನ್ ನಲ್ಲಿದ್ದ ಸೋಂಕಿತರು ಹೊರಗಡೆ ಜನರ ಮಧ್ಯೆ ಸಾರ್ವನಜಿವಾಗಿ ಓಡಾಟ ನಡೆಸುತ್ತಿದ್ದಾರೆ..
ಹೌದು ಇದೇ ರೀತಿ ಸೋಂಕಿತರಿಬ್ಬರು ಹೊರಗೆ ಬಂದು ಸುತ್ತಾಟ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿದ ವೇಳೆ ಇದು ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ತಾಲೂಕಿನ ಉಳುವಾಗಿಲು ಗ್ರಾಮದಲ್ಲಿ ಸೋಂಕಿತರು ಮನೆಬಿಟ್ಟು ಹೋಗಿರುವುದನ್ನು ಕಂಡು ಅಧಿಕಾರಿಗಳಿಗೆ ಶಾಕ್ ಆಗಿದೆ. ಮನೆ ಬಳಿ ಕಾದು ಕಾದು ಅಧಿಕಾರಿಗಳು ಸುಸ್ತಾಗಿದ್ದಾರೆ. ಕೋವಿಡ್ ನಿಯಮ ಉಲ್ಲಂಘಿಸಿದ ಸೋಂಕಿತರಿಬ್ಬರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








