ಗ್ರಾಮಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೊರೊನಾಗೆ ಬಲಿಯಾದರೆ – 50 ಲಕ್ಷ ರೂಪಾಯಿ ಪರಿಹಾರ ಧನ
ಉತ್ತರಪ್ರದೇಶ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಅದ್ರಲ್ಲೂ ಕೋವಿಡ್ ವಾರಿಯರ್ಸ್ ಹಗಲಿರುಳು ಶ್ರಮಿಸುತ್ತಿದ್ದಾರೆ.. ಮತ್ತೊಂದೆಡೆ ಹಲವು ಕ್ಷೇತ್ರದಲ್ಲಿನ ನೌಕರರ ಕೆಲಸ ಹೆಚ್ಚಾಗಿ ಒತ್ತಡವೂ ಹೆಚ್ಚಾಗಿದೆ.. ನಾನ ಕ್ಷೇತ್ರಗಳಲ್ಲಿನ ಜನರು ಕೊರೊನಾಗೆ ಬಲಿಯಾಗ್ತಿದ್ದಾರೆ. ಈ ನಡುವೆ ಉತ್ತರ ಪ್ರದೇಶ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ.
ಕರೊನಾದ ಈ ಸಮಯದಲ್ಲೂ ಗ್ರಾಮಾಭಿವೃದ್ಧಿ ಇಲಾಖೆ ಕೆಲಸ ನಿಲ್ಲಿಸಿಲ್ಲ. ಅದರ ಸಿಬ್ಬಂದಿ ಕರೊನಾ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ರೀತಿ ವಾರಿಯರ್ಗಳ ರೀತಿ ಕೆಲಸ ಮಾಡುತ್ತಿರುವ ಗ್ರಾಮಾಭಿವೃದ್ಧಿ ಇಲಾಖೆಯ ಸಿಬ್ಬಂದಿಯಲ್ಲಿ ಯಾರಾದರೂ ಸೋಂಕಿನಿಂದಾಗಿ ಸಾವನ್ನಪ್ಪಿದರೆ, ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ ಧನವನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.
ಈ ಕುರಿತಾಗಿ ಗ್ರಾಮೀಣಾಭಿವೃದ್ಧಿ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ. ಇಲಾಖೆಯೊಂದಿಗೆ ಕೈ ಜೋಡಿಸಿಕೊಂಡು ದುಡಿಯುತ್ತಿರುವ ಸರ್ಕಾರಿ, ಅರೆ ಸರ್ಕಾರಿ, ಒಪ್ಪಂದಿತ, ದೈನಂದಿನ ಸಂಬಳ, ಹೊರಗುತ್ತಿಗೆ, ಸ್ವಾಯತ್ತ ಸಂಸ್ಥೆಗಳಿಗೂ ಈ ಪ್ರಕಟಣೆ ಅನ್ವಯಿಸುತ್ತದೆ ಎಂದು ತಿಳಿಸಲಾಗಿದೆ.








