Covid19 Report : India : ಕಳೆದ 24 ಗಂಟೆಯಲ್ಲಿ 18,819 ಪ್ರಕರಣಗಳು
ದಿನೇ ದಿನೇ ಕೋವಿಡ್ ದೈನಂದಿನ ಕೇಸ್ ಗಳ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,819 ಹೊಸ ಪ್ರಕರಣಗಳು ಪತ್ತೆಯಾಗಿದೆ.. ಹಿಂದಿನ ದಿನಕ್ಕೆ ಹೋಲಿಸಿದರೆ ಶೇಕಡ 29.7 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನೂ 122 ದಿನಗಳ ಬಳಿಕ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷ ದಾಟಿದ್ದು, ಸದ್ಯ 1,04,555 ಸಕ್ರಿಯ ಪ್ರಕರಣಗಳಿವೆ. 24 ಗಂಟೆಗಳಲ್ಲಿ 39 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೋವಿಡ್ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,116 ರಷ್ಟಾಗಿದೆ.