ಕೋವಿಡ್ ರಿಪೋರ್ಟ್ – ದೇಶದಲ್ಲಿ ಒಂದೇ ದಿನ 38,948 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿತವಾಗುತ್ತಲೇ ಇದೆ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 38,948 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇದೇ ಅವಧಿಯಲ್ಲಿ ದೇಶದಾದ್ಯಂತ 219 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಾದ್ಯಂತ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,40,752ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಸಂಖ್ಯೆ 3,30,27,621ಕ್ಕೆ ತಲುಪಿದೆ.
ಚೇತರಿಕೆ ದರ 97.44 ಇದೆ. ದೇಶದಲ್ಲಿ ಸದ್ಯ 4,04,874 ಸಕ್ರಿಯ ಕೇಸ್ ಗಳಿವೆ.









