ಕೋವಿಡ್ 19 : ಕಳೆದ 24 ಗಂಟೆಗಳಲ್ಲಿ 10,929 ಕೊರೊನಾ ಪ್ರಕರಣಗಳು ಪತ್ತೆ
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 10,929 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
392 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,43,44,683 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,60,265 ಕ್ಕೆ ತಲುಪಿದೆ.
ಒಟ್ಟು ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.44ರಷ್ಟಿದೆ.
ಇನ್ನು ದೇಶದಲ್ಲಿ ಇನ್ನೂ ಸಕ್ರಿಯ ಪ್ರಕರಣಗಳ ಸಂಖ್ಯೆ 1,46,950 ಕ್ಕೆ ಏರಿಕೆಯಾಗಿದೆ.