ಕೊರೊನಾ ರಿಪೋರ್ಟ್ | ಕಳೆದ 24 ಗಂಟೇಲಿ 23,529 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಳಿತ ಮುಂದುವರೆದಿದೆ. ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 23,529 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಅಲ್ಲದೇ ಇದೇ ಅವಧಿಯಲ್ಲಿ 311 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಚೇತರಿಕೆಯ ಪ್ರಮಾಣ ಶೇಕಡ 97.81 ರಷ್ಟಿದೆ.
ಇದರೊಂದಿಗೆ ದೇಶದಾದ್ಯಂತ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,37,39,980 ಕ್ಕೆ ಏರಿಕೆಯಾಗಿದೆ. ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 4,48,062 ಕ್ಕೆ ಏರಿಕೆಯಾಗಿದೆ.
ಒಂದೇ ದಿನ ಕೋವಿಡ್ನಿಂದ 28,718 ಸೋಂಕಿತರು ಚೇತರಿಸಿಕೊಂಡಿದ್ದಾರೆ.
ಇನ್ನು ದೇಶದಲ್ಲಿ 2,82,560 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಒಟ್ಟು 3,30,14,898 ಗುಣಮುಖರಾಗಿದ್ದಾರೆ.
ದೇಶದಲ್ಲಿ ಈ ವರೆಗೂ ಒಟ್ಟು 88,34,70,578 ಡೋಸ್ ಲಸಿಕೆಯನ್ನು ನೀಡಲಾಗಿದೆ.