ಕೋವಿಡ್ : ದೇಶದಲ್ಲಿ 9,419 ಪ್ರಕರಣಗಳು ಪತ್ತೆ
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 9,419 covid19 ಪ್ರಕರಣಗಳು ಪತ್ತೆಯಾಗಿವೆ.
159 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,46,66,241 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,74,111ಕ್ಕೆ ತಲುಪಿದೆ.
ರಾಷ್ಟ್ರೀಯ ಚೇತರಿಕೆ ದರವು ಪ್ರಸ್ತುತ 98.36 ಪ್ರತಿಶತದಷ್ಟಿದೆ. ಇದು ಮಾರ್ಚ್ 2020 ರಿಂದ ಅತಿ ಹೆಚ್ಚು.
ಇನ್ನು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 94,742 ಕ್ಕೆ ಏರಿಕೆಯಾಗಿದೆ.








