ಕೊರೊನಾ ರಿಪೋರ್ಟ್ – 24 ಗಂಟೆಯಲ್ಲಿ 19,740 ಜನರಲ್ಲಿ ಸೋಂಕು ಪತ್ತೆ
ದೇಶದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 19,740 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ನಿನ್ನೆ ಮಹಾಮಾರಿಗೆ 248 ಸೋಂಕಿತರು ಉಸಿರು ಚೆಲ್ಲಿದ್ದಾರೆ.
ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,39,35,309 ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಸಾವಿನ ಸಂಖ್ಯೆ 4,50,375 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 2,36,643, ಕೋವಿಡ್ ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಈವರೆಗೆ 3,32,48,291 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.