ಕೋವಿಡ್ 19 : ಕಳೆದ 24 ಗಂಟೆಗಳಲ್ಲಿ 11,451 ಕೊರೊನಾ ಪ್ರಕರಣಗಳು ಪತ್ತೆ
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 11,451 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
266 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,43,66,987 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,61,057 ಕ್ಕೆ ತಲುಪಿದೆ.
ಒಟ್ಟು ಪ್ರಕರಣಗಳಲ್ಲಿ ಚೇತರಿಕೆ ಪ್ರಮಾಣ 98.24%
13,204 ಜನ ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಒಟ್ಟು ಗುಣಮುಖರ ಸಂಖ್ಯೆ 3,37,63,104 ಕ್ಕೆ ತಲುಪಿದೆ.
ಇನ್ನು ದೇಶದಲ್ಲಿ ಇನ್ನೂ ಸಕ್ರಿಯ ಪ್ರಕರಣಗಳ ಸಂಖ್ಯೆ 1,42,826 ತಲುಪಿದೆ.