ಕೋವಿಡ್ : ದೇಶದಲ್ಲಿ 7,992 ಪ್ರಕರಣಗಳು ಪತ್ತೆ
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 7,992 covid19 ಪ್ರಕರಣಗಳು ಪತ್ತೆಯಾಗಿವೆ.
393 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,46,682,736 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,75,128 ಕ್ಕೆ ತಲುಪಿದೆ.
24 ಗಂಟೆಯಲ್ಲಿ 9,265 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ರಾಷ್ಟ್ರೀಯ ಚೇತರಿಕೆ ದರವು ಪ್ರಸ್ತುತ 98.36 ಪ್ರತಿಶತದಷ್ಟಿದೆ. ಇದು ಮಾರ್ಚ್ 2020 ರಿಂದ ಅತಿ ಹೆಚ್ಚು. ಇನ್ನು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 93,277 ಕ್ಕೆ ಏರಿಕೆಯಾಗಿದೆ.