ಕೋವಿಡ್ : ದೇಶದಲ್ಲಿ 6,822 ಪ್ರಕರಣಗಳು ಪತ್ತೆ , ಓಮೈಕ್ರಾನ್ ಸಂಖ್ಯೆ 23ಕ್ಕೆ ಏರಿಕೆ
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 6,822 covid19 ಪ್ರಕರಣಗಳು ಪತ್ತೆಯಾಗಿವೆ.
220 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,46,33,255 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,73,326 ಕ್ಕೆ ತಲುಪಿದೆ.
ರಾಷ್ಟ್ರೀಯ ಚೇತರಿಕೆ ದರವು ಪ್ರಸ್ತುತ 98.36 ಪ್ರತಿಶತದಷ್ಟಿದೆ. ಇದು ಮಾರ್ಚ್ 2020 ರಿಂದ ಅತಿ ಹೆಚ್ಚು.
ಕಳೆದ 24 ಗಂಟೆಗಳಲ್ಲಿ ಕೋವಿಡ್ ನಿಂದ 10,004 ಗುಣಮುಖರಾಗಿದ್ದಾರೆ.
ಈವರೆಗೆ 34,060,774 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 95,014 ಕ್ಕೆ ಇಳಿಕೆಯಾಗಿದೆ.
ದೇಶದಾದ್ಯಂತ ಈವರೆಗೆ ಒಟ್ಟು 128.76 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 23 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ








