ಕೋವಿಡ್ : ಮತ್ತೆ ರಾಜ್ಯದಲ್ಲಿ ಏರಿಕೆಯಾದ ದೈನಂದಿನ ಪ್ರಕರಣಗಳು
ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ದೈನಂದಿನ ಕೇಸ್ ಗಳ ಸಂಖ್ಯೆ ಹೆಚ್ಚಾಗಿದೆ.. ನಿನ್ನೆಗಿಂತಲೂ ಇಂದು ಕೊರೊನಾ ಪಾಸಿಟಿವ್ ಪ್ರಕರಣಗಳು ಏರಿಕೆಯಾಗಿದೆ. ನಿನ್ನೆ 1,564 ಜನರಿಗೆ ಸೋಂಕು ದೃಢಪಟ್ಟಿತ್ತು. ಇಂದು 2,848 ಮಂದಿಗೆ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 2,848 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 67 ಜನ ಬಲಿಯಾಗಿದ್ದಾರೆ.
ಇದೇ ಅವಧಿಯಲ್ಲಿ 5,631 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೂ 28,56,491 ಜನರಿಗೆ ಸೋಂಕು ತಗುಲಿದ್ದು, 35,434 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,79,038ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 520 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,16,181ಕ್ಕೆ ಏರಿಕೆಯಾಗಿದೆ. 3,136 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 11,85,110ಕ್ಕೆ ಏರಿಕೆ ಕಂಡಿದೆ.
ಬೆಂಗಳೂರು ನಗರದಲ್ಲಿ ಇಂದು 7 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,675 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 15,395 ಸಕ್ರಿಯ ಪ್ರಕರಣಗಳಿವೆ.
ಇನ್ನೂ ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,796 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,05,85,229ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 723 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,02,728ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 4,82,071 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,97,00,430ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 42,352 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 15,22,504 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು ದೇಶದಲ್ಲಿ ಈವರೆಗೆ 41,97,77,457 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. 35,28,92,046 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.