‘ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ದೀರ್ಘಕಾಲ ಪ್ರತಿಕಾಯ ಉಳಿಯಲಿದೆ’..!
ನವದೆಹಲಿ:ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಜೊತೆಗೆ ಲಸಿಕೆ ಕೊರತೆಯ ಸಮಸ್ಯೆಯನ್ನೂ ಸಹ ದೇಶ ಎದುರಿಸುತ್ತಿದೆ..
ಈ ನಡುವೆ ಲಘು ಲಕ್ಷಣಗಳ ಕೋವಿಡ್–19ರಿಂದ ಚೇತರಿಸಿಕೊಂಡವರಲ್ಲಿ ತಿಂಗಳ ನಂತರವೂ ರೋಗನಿರೋಧಕ ಕೋಶಗಳು ವೈರಾಣುವಿನ ವಿರುದ್ಧ ಪ್ರತಿಕಾಯಗಳನ್ನು ಸೃಷ್ಟಿಸುತ್ತಿರುತ್ತವೆ ಎಂದು ಅಧ್ಯಯನವೊಂದು ತಿಳಿಸಿದೆ.
ಹೌದು … ಅಮೆರಿಕ ಸೇಂಟ್ ಲೂಯಿಸ್‌ನ ವಾಷಿಂಗ್ಟನ್ ಯುನಿವರ್ಸಿಟಿ ಸ್ಕೂಲ್ ಆಫ್ ಮೆಡಿಸಿನ್‌ನ ಸಂಶೋಧಕರ ಅಧ್ಯಯನದ ಪ್ರಕಾರ ಈ ಜೀವಕೋಶಗಳು ಜೀವಿತಾವಧಿಯಲ್ಲಿ ಎಲ್ಲ ಸಮಯದಲ್ಲೂ ಪ್ರತಿಕಾಯಗಳನ್ನು ಉತ್ಪಾದಿಸುತ್ತವೆ ಎಂಬ ಮಾಹಿತಿ ಲಭ್ಯವಾಗಿದೆ. ನೇಚರ್ ಜರ್ನಲ್ ನಲ್ಲಿ ಈ ಅಧ್ಯಯನದ ವರದಿ ಪ್ರಕಟವಾಗಿದೆ.
ಕೋವಿಡ್–19ರ ನಂತರ ಪ್ರತಿಕಾಯಗಳು ಬೇಗನೆ ಕ್ಷೀಣಿಸುತ್ತವೆ, ಹಾಗಾಗಿ ರೋಗನಿರೋಧಕ ಶಕ್ತಿ ದೀರ್ಘಕಾಲ ಇರುವುದಿಲ್ಲ ಎಂಬ ವರದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದವು. ಆದರೆ ಅವು ದತ್ತಾಂಶಗಳ ತಪ್ಪು ವ್ಯಾಖ್ಯಾನವಾಗಿದೆ. ತೀವ್ರ ಸೋಂಕಿತರಲ್ಲಿ ಪ್ರತಿಕಾಯದ ಮಟ್ಟಗಳು ಇಳಿಯುವುದು ಸಾಮಾನ್ಯ. ಆದರೆ ಅದು ಶೂನ್ಯಕ್ಕೆ ಇಳಿಯುವುದಿಲ್ಲ ಎಂದು ಸಂಶೋಧಕರು ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.









