ಕೋವಿಡ್ 19 : ಕಳೆದ 24 ಗಂಟೆಗಳಲ್ಲಿ 11,903 ಕೊರೊನಾ ಪ್ರಕರಣಗಳು ಪತ್ತೆ
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 11,903 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
311 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,43,08,140 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,59,191ಕ್ಕೆ ತಲುಪಿದೆ.
ಒಟ್ಟು ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.44ರಷ್ಟಿದೆ.
ಇನ್ನು ದೇಶದಲ್ಲಿ ಇನ್ನೂ ಸಕ್ರಿಯ ಪ್ರಕರಣಗಳ ಸಂಖ್ಯೆ 1,51,209 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 14,159 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,36,97,740 ಕ್ಕೆ ತಲುಪಿದೆ.