ರಾಜ್ಯದಲ್ಲಿ ಕೊರೊನಾ ಬ್ಲಾಸ್ಟ್ – ಒಂದೇ ದಿನ 41,664 ಮಂದಿಗೆ ಸೋಂಕು – 349 ಸಾವು
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 41,664 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. 349 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕೇವಲ ಬೆಂಗಳೂರಿನಲ್ಲಿಯೇ 13402 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 94 ಮಂದಿ ಬಲಿಯಾಗಿದ್ದಾರೆ. ಒಂದೇ ದಿನ 34,425 ಸೋಂಕಿತರು ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 7379 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 15,44,982ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,17,1931ಕ್ಕೆ ಏರಿದ್ದು, ಸಾವಿನ ಸಂಖ್ಯೆ 21,434ಕ್ಕೆ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 6054,94ಕ್ಕೆ ತಲುಪಿದೆ.
ಇನ್ನೂ ದೇಶದಲ್ಲಿ ಶನಿವಾರ 3,26,098 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,890 ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,26,098 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,890 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,43,72,907ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,66,207ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 3,53,299 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,04,32,898ಕ್ಕೆ ತಲುಪಿದೆ. ದೇಶದಲ್ಲಿನ್ನೂ 36,73,802 ಸಕ್ರಿಯ ಪ್ರಕರಣಗಳಿವೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.