ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ 1.91 ಕೋಟಿ ಡೋಸ್ಗಳು ಲಭ್ಯ
ದೇಶಾದ್ಯಂತ ಕೋವಿಡ್ ಹಾವಳಿಯ ನಡುವೆ ಲಸಿಕೆ ಕೊರತೆ ಉಂಟಾಗಿದೆ ಎಂದು ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಾಯಕರು ಕೇಂದ್ರದ ವಿರುದ್ಧ ಆರೋಪಗಳನ್ನ ಮಾಡುತ್ತಿರುವ ಬೆನ್ನಲ್ಲೇ ಲಸಿಕೆಯ ಪ್ರಮಾನದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯ 1.91 ಕೋಟಿಗೂ ಹೆಚ್ಚು ಡೋಸ್ಗಳು ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗೆ ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ 39.46 ಕೋಟಿಗೂ ಹೆಚ್ಚು ಡೋಸ್ಗಳನ್ನು ವಿತರಿಸಿದೆ. ಇದರಲ್ಲಿ ಪೋಲಾಗಿರುವ ಲಸಿಕೆ ಸೇರಿ ಒಟ್ಟು 37,55,38,390 ಡೋಸ್ಗಳನ್ನು ಉಪಯೋಗಿಸಲಾಗಿದೆ. ಇನ್ನೂ 1.91 ಕೋಟಿಗೂ ಹೆಚ್ಚು ಡೋಸ್ಗಳು ಬಾಕಿ ಉಳಿದಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.