‘ಕೊರೊನಾ ಸೋಂಕಿಗೆ ಒಳಗಾದವರಿಗೆ ಲಸಿಕೆ ನೀಡುವ ಅಗತ್ಯವಿಲ್ಲ’
ನವದೆಹಲಿ: ದೇಶಾದ್ಯಂರ ಮಹಾಮಾರಿ ಕೊರೊನಾ 2ನೇ ಅಲೆಗೆ ಜನ ತತ್ತರಿಸಿಹೋಗಿದ್ದಾರೆ.. ಮತ್ತೊಂದೆಡೆ ಲಸಿಕೆ ಅಬಿಯಾನವೂ ಜಾರಿಯಲ್ಲಿದೆ.. ಆದ್ರೆ ಸೋಂಕಿತರು ಲಸಿಕೆ ಪಡೆಯಬಹುದಾ ಎಲ್ಲವಾ ಎಂಬ ಗೊಂದಲಗಳು ಇತ್ತು.. ಇದೀಗ ಇದಕ್ಕೆ ಅಧ್ಯಯನ ವೊಂದರಿಂದ ಉತ್ತರ ಸಿಕ್ಕಿದೆ.
ವಿವೇಚನೆಯಿಲ್ಲದ ಹಾಗೂ ಅಪೂರ್ಣವಾದ ಲಸಿಕಾ ಅಭಿಯಾನವು ರೂಪಾಂತರ ತಳಿಗಳ ಹೊರಹೊಮ್ಮುವಿಕೆಯನ್ನು ಪ್ರಚೋದಿಸುತ್ತದೆ ಎಂದು ಏಮ್ಸ್ನ ವೈದ್ಯರು, ಕೊರೊನಾ ರಾಷ್ಟ್ರೀಯ ಕಾರ್ಯಪಡೆಯ ಸದಸ್ಯರು, ಸಾರ್ವಜನಿಕ ಆರೋಗ್ಯ ತಜ್ಞರ ತಂಡ ಹೇಳಿದ್ದು, ಕೊರೊನಾ ವೈರಸ್ ಸೋಂಕಿಗೆ ಒಳಗಾದವರಿಗೆ ಲಸಿಕೆ ಹಾಕುವ ಅಗತ್ಯವಿಲ್ಲ ಎಂದೂ ತಜ್ಞರು ಸಲಹೆ ನೀಡಿದ್ದಾರೆ.
ಮಕ್ಕಳನ್ನು ಸೇರಿದಂತೆ ದೊಡ್ಡ ಜನಸಮುದಾಯಕ್ಕೆ ಲಸಿಕೆ ನೀಡುವ ಪ್ರಯತ್ನಗಳ ಬದಲಿಗೆ, ದುರ್ಬಲರಿಗೆ ಮತ್ತು ಸೋಂಕಿನ ಅಪಾಯ ಇರುವವರಿಗೆ ಮೊದಲು ಲಸಿಕೆ ನೀಡಬೇಕು. ಇದೇ ಈ ಹೊತ್ತಿನ ಗುರಿಯಾಗಿರಬೇಕು ಎಂದು ಭಾರತೀಯ ಸಾರ್ವಜನಿಕ ಆರೋಗ್ಯ ಸಂಸ್ಥೆ, ಸಾಂಕ್ರಾಮಿಕ ರೋಗಶಾಸ್ತ್ರಜ್ಞರ ಸಂಘ ಮತ್ತು ಇಂಡಿಯನ್ ಅಸೋಸಿಯೇಷನ್ ಆಫ್ ಪ್ರಿವೆಂಟಿವ್ ಅಂಡ್ ಸೋಶಿಯಲ್ ಮೆಡಿಸಿನ್ ನ ತಜ್ಞರು ವರದಿ ನೀಡಿದ್ದಾರೆ. ಇನ್ನು ಎಲ್ಲರಿಗೂ ಒಂದೇ ಬಾರಿಗೆ ಲಸಿಕೆ ಕೊಡುವ ಪ್ರಯತ್ನಗಳಿಂದ ಮಾನವ ಮತ್ತು ಇತರ ಸಂಪನ್ಮೂಲಗಳು ಬರಿದಾಗುತ್ತವೆ ಎಂದು ತಜ್ಞರು ವರದಿಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.