ಕೋವ್ಯಾಕ್ಸಿನ್ – ಕೋವಿಶೀಲ್ಡ್ ಮಿಕ್ಸ್ ಅಂಡ್ ಮ್ಯಾಚ್ ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸು..!
ವಿಶ್ವಾದ್ಯಂತ ಕೊರೊನಾ ವೈರಸ್ , ರೂಪಾಂತರ ತಳಿಗಳ ಹಾವಳಿಯ ನಡುವೆ ಕೊರೊನಾ ಲಸಿಕೆ ಅಭಿಯಾನವೂ ಹೆಚ್ಚಾಗಿದೆ.. ಈ ನಡುವೆ ಅನೇಕ ಲಸಿಕೆಗಳ ಬಗ್ಗೆ ಹಲವಾರು ಗೊಂದಲಗಳಿದ್ದು, ಅದ್ರಲ್ಲಿ ಚೀನೀಯ ಲಸಿಕೆಯೂ ಒಂದಾಗಿದೆ.. ಈ ನಡುವೆ ಅನೇಕರಿಗೆ ಇನ್ನೂವರೆಗೂ ಯಾವುದೇ ಲಸಿಕೆ ಮೇಲೂ ನಂಬಿಕೆ ಬಂದಿಲ್ಲ.. ಅಡ್ಡಪರಿಣಾಮಗಳಾಗಬಹುದಾದ ಆತಂಕದಲ್ಲೇ ಲಸಿಕೆ ಪಡೆಯೋದಕ್ಕೆ ಹಿಂದೂ ಮುಂದು ನೋಡ್ತಿದ್ದಾರೆ..ಇದೇ ಪರಿಸ್ಥಿತಿ ಭಾರತದಲ್ಲೂ ಇದೆ. ಈ ನಡುವೆ
ಕೋವಿಡ್ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್‌ಗಳ ಮಿಶ್ರ ಪ್ರಯೋಗಕ್ಕೆ ಕೇಂದ್ರ ಔಷಧ ಗುಣಮಟ್ಟ ಪ್ರಾಧಿಕಾರ ಶಿಫಾರಸು ಮಾಡಿದೆ. ಕ್ಲಿನಿಕಲ್ ಟ್ರಯಲ್ ನಡೆಸಲು ವೆಲ್ಲೂರ್‌ನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್‌ಗೆ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ. ಪ್ರಾಧಿಕಾರದ ವಿಷಯ ತಜ್ಞರ ಸಮಿತಿಯು ವಿಸ್ತೃತ ಚರ್ಚೆಯ ಬಳಿಕ 300 ಮಂದಿ ಆರೋಗ್ಯವಂತರ ಮೇಲೆ ಲಸಿಕೆಯ ಮಿಶ್ರಣದ 4ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲು ಸಿಎಂಸಿಗೆ ಅನುಮತಿ ನೀಡಿದೆ. ಒಬ್ಬ ವ್ಯಕ್ತಿಗೆ ಲಸಿಕೆಯ ಕೋರ್ಸ್ ಅನ್ನು ಪೂರ್ಣಗೊಳಿಸುವ ಸಲುವಾಗಿ ಎರಡು ಭಿನ್ನ ಲಸಿಕೆಗಳ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಡೋಸ್ ನೀಡಬಹುದೇ ಎಂಬುದನ್ನು ತಿಳಿಯುವುದು ಈ ಪ್ರಯೋಗದ ಉದ್ದೇಶ ಎಂದು ಮೂಲಗಳು ಹೇಳಿವೆ.
ಮಧ್ಯಪ್ರಾಚ್ಯದಲ್ಲಿ ಡೆಲ್ಟಾ ಅಟ್ಟಹಾಸ – ನಾಲ್ಕನೇ ಅಲೆ ಸೃಷ್ಟಿ – WHO
18 ವರ್ಷ ಮೇಲ್ಪಟ್ಟವರಲ್ಲಿ ನಡೆಯುತ್ತಿರುವ 2 ಮತ್ತು 3ನೇ ಹಂತದ ಕ್ಲಿನಿಕಲ್ ಟ್ರಯಲ್ ನ ದತ್ತಾಂಶಗಳ ಆಧಾರದಲ್ಲಿ 15ರಿಂದ 17 ವರ್ಷದ ವರೆಗಿನವರಲ್ಲಿ 2 ಮತ್ತು 3ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸುವ ಬಗ್ಗೆಯೂ ತಜ್ಞರ ಸಮಿತಿ ಚರ್ಚೆ ನಡೆಸಿದೆ. 18 ವರ್ಷ ಮೇಲ್ಪಟ್ಟವರ 2 ಮತ್ತು 3ನೇ ಹಂತದ ಕ್ಲಿನಿಕಲ್ ಟ್ರಯಲ್ ನಲ್ಲಿ ಸುರಕ್ಷತೆ ಮತ್ತು ಪ್ರತಿರೋಧ ಶಕ್ತಿಗೆ ಸಂಬಂಧಿಸಿ ದೊರೆತ ದತ್ತಾಂಶಗಳನ್ನು ಕೇಂದ್ರ ಔಷಧ ಗುಣಮಟ್ಟ ಪ್ರಾಧಿಕಾರಕ್ಕೆ ಸಲ್ಲಿಸುವಂತೆಯೂ ತಜ್ಞರ ಸಮಿತಿ ಸೂಚಿಸಿದೆ ಎಂದೂ ಹೇಳಲಾಗಿದೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿಷೇಧ – ಆಗಸ್ಟ್ 31ರವರೆಗೆ ವಿಸ್ತರಣೆ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.