ಕೋವಿಡ್ ವೈರಸ್ ನ ಮತ್ತಷ್ಟು ರೂಪಾಂತರಗಳು ಸೃಷ್ಟಿಯಾಗುವ ಆತಂಕ : WHO
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಈ ನಡುವೆ ಕೋವಿಡ್ ವೈರಸ್ ನ ಹೊಸ ರೂಪಾಂತರ ತಳಿಗಳು ಪ್ರಪಂಚದಾದ್ಯಂತ ಹರಡುವ ಅಪಾಯವಿದ್ದು, ಮುಂದಿನ ದಿನಗಳಲ್ಲಿ ಪ್ರಬಲವಾಗಿ ಪೀಡಿಸುವ ಅಪಾಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಸಮಿತಿಯು, ಕೋವಿಡ್-19 ವೈರಸ್ ನ ಹೊಸ ರೂಪಾಂತರ ತಳಿಗಳು ಪ್ರಪಂಚದಾದ್ಯಂತ ಹರಡುವ ಅಪಾಯವಿದ್ದು, ಮುಂದಿನ ದಿನಗಳಲ್ಲಿ ಪ್ರಬಲವಾಗಿ ಪೀಡಿಸುವ ಅಪಾಯವಿದೆ. ಇದು ಸಾಂಕ್ರಾಮಿಕ ರೋಗ ತಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಕಠಿಣಗೊಳಿಸುವ ಸಾಧ್ಯತೆ ಅಧಿಕವಾಗಿದೆ ಎಂದು ಹೇಳಿದೆ.
ಈ ಬಗ್ಗೆ ಸಮಿತಿಯ ಅಧ್ಯಕ್ಷ ಡಿಡಿಯರ್ ಹೌಸಿನ್ ಅವರು ಮಾತನಾಡಿದ್ದು, ಕೋವಿಡ್ಗೆ ಸಂಬಂಧಿಸಿದ ಇತ್ತೀಚಿನ ಪ್ರವೃತ್ತಿಗಳು ಚಿಂತೆಗೀಡು ಮಾಡಿವೆ. ಒಂದೂವರೆ ವರ್ಷದ ಹಿಂದೆ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಆದರೆ, ಈಗಲೂ ಅದೇ ಪರಿಸ್ಥಿತಿಯಲ್ಲೇ ಮುಂದುವರಿದಿದೆ. ಸದ್ಯಕ್ಕೆ ಕೋವಿಡ್-19ನ 4 ರೂಪಾಂತರಗಳು ಜಾಗತಿಕವಾಗಿ ಆತಂಕ ಉಂಟು ಮಾಡಿವೆ. ಆಲ್ಫಾ, ಬೀಟಾ, ಗಾಮಾ ಮತ್ತು ವಿಶೇಷವಾಗಿ ಭಾರತದಲ್ಲಿ ಮೊದಲ ಬಾರಿಗೆ ಪತ್ತೆಯಾದ, ಅತಿ ವೇಗವಾಗಿ ಹರಡುತ್ತಿರುವ ಡೆಲ್ಟಾ ರೂಪಾಂತರಗಳು ಪ್ರಾಬಲ್ಯ ಸಾಧಿಸಿವೆ ಎಂದು ತಿಳಿಸಿದ್ದಾರೆ.
ಸುಮಾರು 2 ವರ್ಷಗಳಿಂದ ಇಡೀ ಜಗತ್ತನ್ನ ಇನ್ನೆಲ್ಲದಂತೆ ಕಾಡಿರಿವ ಚೀನೀಯ ಕೊರೊನಾ ಮಹಾಮಾರಿಯು ಅನೇಕ ಸಂಕಷ್ಟಗಳನ್ನ ತಂದಿದೆ. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನಾ ವಿರುದ್ಧದ ಉತ್ತರ ಪ್ರದೇಶದ ಹೋರಾಟವನ್ನು ಶ್ಲಾಘಿಸಿದ ಮೋದಿ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.