“ಮುಂದಿನ 100ದಿನಗಳು ಅತ್ಯಂತ ನಿರ್ಣಾಯಕ” – ಕೋವಿಡ್ 3ನೇ ಅಲೆ ಬಗ್ಗೆ ಎಚ್ಚರಿಕೆ..!
ನವದೆಹಲಿ: ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಈ ನಡುವೆ ಕೋವಿಡ್-19 3ನೇ ಅಲೆ ನಿರ್ವಹಣೆ ವಿಚಾರವಾಗಿ ಕೇಂದ್ರ ಸರ್ಕಾರ ಮಹತ್ವದ ಎಚ್ಚರಿಕೆ ನೀಡಿದ್ದು, ಭಾರತ ಈಗಾಗಲೇ ಕೋವಿಡ್-19 2ಅಲೆಯಿಂದಾಗಿ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ತತ್ತರಿಸಿಹೋಗಿದ್ದು, ಇದೀಗ ಕೆಲವೇ ದಿನಗಳ ಅಂತರದಲ್ಲಿ ಮೂರನೇ ಅಲೆಯ ಭೀತಿ ಆರಂಭವಾಗಿದೆ. ಇದೇ ವಿಚಾರವಾಗಿ ಕಳೆದ ಕೆಲ ವಾರಗಳಿಂದಲು ಕೇಂದ್ರ ಸರ್ಕಾರ ಮತ್ತು ಕೇಂದ್ರ ಆರೋಗ್ಯ ಇಲಾಖೆ ಕಠಿಣ ಎಚ್ಚರಿಕೆಗಳನ್ನು ನೀಡುತ್ತಾಬಂದಿದ್ದು, ಇದೀಗ ಇದೇ ವಿಚಾರವಾಗಿ ನೀತಿ ಆಯೋಗ ಆರೋಗ್ಯ ವಿಭಾಗ ಕೂಡ ಮಹತ್ವದ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ.ವಿ.ಕೆ ಪಾಲ್ ಅವರು, ಭಾರತದ ಕೋವಿಡ್-19 3ನೇ ಅಲೆಯ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ 100 ರಿಂದ 125 ದಿನಗಳು ಅತ್ಯಂತ ನಿರ್ಣಾಯಕವಾದದ್ದು. ಇತ್ತೀಚಿನ ದಿನಗಳಲ್ಲಿ ಹೊಸ ಪ್ರಕರಣಗಳಲ್ಲಿನ ಕುಸಿತವು ನಿಧಾನವಾಗಿದೆ. ಇದು ಖಂಡಿತಾ ನಮದೆ ಎಚ್ಚರಿಕೆಯ ಸಂಕೇತವಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಭಾರತದ ಲಸಿಕೀಕರಣ ಕುರಿತು ಮಾತನಾಡಿದ ಅವರು, ನೀತಿ ಆಯೋಗ ಮತ್ತು ಐಸಿಎಂಆರ್ ನಡೆಸಿದ ಅಧ್ಯಯನವೊಂದರ ವರದಿಯನ್ನು ಹಂಚಿಕೊಂಡರು. ಈ ವರದಿಯನ್ವಯ ಹೆಚ್ಚಿನ ಅಪಾಯಕಾರಿ ವರ್ಗದ ಪೊಲೀಸ್ ಸಿಬ್ಬಂದಿಗಳಲ್ಲಿ ಲಸಿಕೆ ಪರಿಣಾಮಕಾರಿತ್ವವನ್ನು ವಿಶ್ಲೇಷಿಸಲಾಗಿದೆ. ಕೋವಿಡ್ 2ನೇ ಅಲೆಯಲ್ಲಿ ಶೇ.95 ರಷ್ಟು ಕೋವಿಡ್-19 ಸಾವುಗಳನ್ನು ತಡೆಗಟ್ಟುವಲ್ಲಿ ಎರಡು ಪ್ರಮಾಣದ ಕೋವಿಡ್ ಲಸಿಕೆ ಯಶಸ್ವಿಯಾಗಿದೆ ಎಂದು ಅಧ್ಯಯನವು ತೋರಿಸುತ್ತದೆ.
ಒಂದು ಡೋಸ್ ಲಸಿಕೆ ಮರಣ ಪ್ರಮಾಣವನ್ನು ಶೇಕಡಾ 82 ರಷ್ಟು ಕಡಿಮೆ ಮಾಡಲು ಸಾಧ್ಯವಾಗಿದ್ದು, ಎರಡನೇ ಅಲೆಯಲ್ಲಿ ಕೋವಿಡ್-19 ನಿಂದ ಉಂಟಾಗುವ ಶೇ. 95 ರಷ್ಟು ಸಾವುಗಳನ್ನು ತಡೆಗಟ್ಟುವಲ್ಲಿ ಎರಡು ಪ್ರಮಾಣದ ಲಸಿಕೆ ಯಶಸ್ವಿಯಾಗಿದೆ. ನಾವು ಜುಲೈ ಗೂ ಮೊದಲು 50 ಕೋಟಿ ಡೋಸೇಜ್ ನೀಡುವ ನಿಗದಿತ ಗುರಿಯತ್ತ ಸಾಗುತ್ತಿದ್ದೇವೆ. ನಾವು ಅದನ್ನು ಸಾಧಿಸುವ ಹಾದಿಯಲ್ಲಿದ್ದೇವೆ. ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ 66 ಕೋಟಿ ಡೋಸ್ ಗಳಿಗೆ ಸರ್ಕಾರ ಆದೇಶಿಸಿದೆ. ಹೆಚ್ಚುವರಿಯಾಗಿ, 22 ಕೋಟಿ ಡೋಸ್ ಲಸಿಕೆ ಖಾಸಗಿ ವಲಯಕ್ಕೆ ಹೋಗುತ್ತದೆ ಎಂದು ಅವರು ಹೇಳಿದ್ದಾರೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.