ಕೋವಿಡ್ ರಿಪೋರ್ಟ್ : ದೇಶದಲ್ಲಿ ಒಂದೇ ದಿನ 31,382 ಕೊರೊನಾ ಪ್ರಕರಣಗಳು ದೃಢ
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 31,382 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 318 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 33,594,803 ಕ್ಕೆ ತಲುಪಿದ್ದು, ಹೆಮ್ಮಾರಿ ಸೋಂಕಿನಿಂದ ಉಸಿರು ನಿಲ್ಲಿಸಿದವರ ಸಂಖ್ಯೆ 446368 ಕ್ಕೆ ಏರಿಕೆಯಾಗಿದೆ.
ಭಾರತ್ ಬಂದ್ ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಂಬಲ
ಇನ್ನು ನಿನ್ನೆ 32542 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಾದ್ಯಂತ ಈವರೆಗೂ 32848273 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿನ್ನೂ 300162 ಸಕ್ರಿಯ ಪ್ರಕರಣಗಳಿವೆ. ನಿನ್ನೆ ದೇಶದಲ್ಲಿ 15,65,696 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 72,20,642 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 84,15,18,026 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.









