ಕೋವಿಡ್ : ರಾಜ್ಯದಲ್ಲಿಂದು 3,979 ಹೊಸ ಕೇಸ್ ಪತ್ತೆ , 138 ಮಂದಿ ಬಲಿ
ಬೆಂಗಳೂರು : ರಾಜ್ಯದಲ್ಲಿ ಕ್ರಮೇಣ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಇದು ಸಮಾಧಾನಕರ ಸಂಗತಿಯಾಗಿದೆ.. ಕಳೆದ 24 ಗಂಟೆಗಳಲ್ಲಿ 3979 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2823444ಕ್ಕೆ ಏರಿಕೆಯಾಗಿದೆ.
ಇನ್ನೂ 9768 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 2678473ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು ಮಾಹಾಮಾರಿಗೆ 138 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಈವರೆಗೂ ಸಾವನಪ್ಪಿದವರ ಸಂಖ್ಯೆ 34425ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸದ್ಯ 110523 ಸಕ್ರಿಯ ಪ್ರಕರಣಗಳಿವೆ.ಸೋಂಕಿನ ಪ್ರಮಾಣ ಶೇ.2.46 ರಷ್ಟಿದ್ದು, ಮರಣ ಪ್ರಮಾಣ ಶೇ.3.46 ರಷ್ಟಿದೆ. ಬೆಂಗಳೂರಿನಲ್ಲಿ 969 ಹೊಸ ಪ್ರಕರಣ ಪತ್ತೆಯಾಗಿದ್ದು, 3176 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.