ರಾಜ್ಯದಲ್ಲಿ ಮತ್ತೆ ಏರಿಕೆಯಾದ ಸೋಂಕು ಪ್ರಕರಣಗಳು : 3,222 ಮಂದಿಗೆ ಪಾಸಿಟಿವ್
ಕೆಲ ದಿನಗಳಿಂದ ರಾಜ್ಯದಲ್ಲಿ ಕೊರೊನಾ ಹಾವಳಿ ಕಡಿಮೆಯಾಗಿದೆ.. ಇದರ ಬೆನ್ನಲ್ಲೇ ಲಾಕ್ ಡೌನ್ ಕೂಡ ಸಡಿಲಿಕೆ ಮಾಡಲಾಗಿದ್ದು, ನಿರ್ಬಂಧನೆಗಳನ್ನ ತೆಗೆದುಹಾಕಲಾಗ್ತಿದೆ,. ಆದ್ರೆ ಈ ನಡುವೆ ಇಂದು ರಾಜ್ಯದಲ್ಲಿ ಕಳೆ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗಿದೆ.. 3222 ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, 93 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 753 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 16 ಮಂದಿ ಮೃತಪಟ್ಟಿದ್ದಾರೆ. ನಿನ್ನೆಗೆ ಹೋಲಿಸಿದರೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣ ಮತ್ತೆ ಹೆಚ್ಚಾಗಿದೆ. ನಿನ್ನೆ 2576 ಸೋಂಕು ಪ್ರಕರಣಗಳು ದೃಢಪಟ್ಟಿದ್ದವು.
ರಾಜ್ಯದಲ್ಲಿ ಒಂದು ದಿನದಲ್ಲಿ 14,724 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 10,722 ಮಂದಿ ಗುಣಮುಖಿತರಾಗಿದ್ದಾರೆ. ಈ ಮೂಲಕ ಒಟ್ಟಾರೆ ಗುಣಮುಖಿತರ ಸಂಖ್ಯೆ 27,19,479ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 28,40,428ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 34,929ಕ್ಕೆ ಜಿಗಿತ ಕಂಡಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 85,997ಕ್ಕೆ ಇಳಿಕೆಯಾಗಿದೆ. ಇನ್ನೂ ದೇಶದಲ್ಲಿ ಕೊರೊನಾ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ ಒಟ್ಟು 37,566 ಮಂದಿಯಲ್ಲಿ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 37,566 ಮಂದಿಗೆ ಸೋಂಕು ದೃಢಪಟ್ಟಿದ್ದು, 907 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಾದ್ಯಂತ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,03,16,897 ಕ್ಕೆ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 3,97,637 ಕ್ಕೆ ಏರಿಕೆಯಾಗಿದೆ. ಇನ್ನು ನಿನ್ನೆ 56,994 ಕೊರೊನಾ ಸೋಂಕಿತರು ಚೇತರಿಸಿಕೊಂಡಿದ್ದು, ಈವರೆಗೂ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2,93,66,601 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 5,52,659 ಸಕ್ರಿಯ ಪ್ರಕರಣಗಳಿವೆ.