ರಾಜ್ಯದಲ್ಲಿ ಮುಂದುವರೆದ ಕೊರೊನಾ ರಣಕೇಕೆ – 34,281 ಪಾಸಿಟಿವ್ ಪ್ರಕರಣಗಳು ಪತ್ತೆ
ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 34,281 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 23,06,665ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಇಂದು 11,772 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 10,84,844ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 218 ಮಂದಿ ಬಲಿಯಾಗಿದ್ದಾರೆ.
ಇನ್ನೂ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,67,334 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 4529 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆಯಾಗಿದೆ. 2,83,248 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ನಿನ್ನೆ 2,19,86,363 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ್ನೂ ಸದ್ಯ ದೇಶದಲ್ಲಿ 32,26,719 ಸಕ್ರಿಯ ಪ್ರಕರಣಗಳಿವೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.