ರಾಜ್ಯದಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಳ – 3,382 ಕೇಸ್ ದಾಖಲು
ರಾಜ್ಯದಲ್ಲಿ ಕಳೆದ 2 ದಿನಗಳಿಂದ ಮತ್ತೆ ದೈನಂದಿನ ಕೇಸ್ ಗಳ ಸಂಖ್ಯೆ ಹೆಚ್ಚಾಗ್ತಿದ್ದು, ಆತಂಕ ಹೆಚ್ಚಾಗಿದೆ.. ಇಂದು 3,382 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,43,810ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 111 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,040ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 813 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,13,559ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ 11 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ 12,763 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,32,242ಕ್ಕೆ ಏರಿಕೆಯಾಗಿದೆ. ಇನ್ನು 76,505 ಸಕ್ರೀಯ ಪ್ರಕರಣಗಳಿವೆ.
ಇನ್ನೂ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 45,951 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. 817 ಮಂದಿ ಸೋಂಕಿತರು ಕೊರೊನಾದಿಂದ ಕೊನೆಯುಸಿರೆಳೆದಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 45,951 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 817 ಮಂದಿ ಸೋಂಕಿತರ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಾದ್ಯಂತ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,03,62,848ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 3,98,454ಕ್ಕೆ ಬಂದು ತಲುಪಿದೆ. ಇನ್ನು ನಿನ್ನೆ 60,729 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಈವರೆಗೂ ದೇಶದಲ್ಲಿ 2,94,27,330 ಮಂದಿ ಸೋಂಕಿನಿಂದ ಚೇತರಿಸಿಕೊಂಡಂತಾಗಿದೆ. ದೇಶದಲ್ಲಿನ್ನೂ 5,37,064 ಸಕ್ರಿಯ ಪ್ರಕರಣಗಳಿವೆ.