ರಾಜ್ಯದಲ್ಲಿ ಇಂದು ಹೊಸದಾಗಿ 9808 ಜನರಲ್ಲಿ ಸೋಂಕು ದೃಢ..!
ಬೆಂಗಳೂರು: ರಾಜ್ಯದಲ್ಲಿ ಕ್ರಮೇಣ ಕೊರೊನಾ 2ನೇ ಅಲೆಯ ಅಬ್ಬರ ಕಡಿಮೆಯಾಗ್ತಿದೆ.. ದಿನೇ ದಿನೇ ಸೋಂಕಿತರು , ಸಾವಿನ ಸಂಖ್ಯೆ ಕಡಿಮೆಯಾಗ್ತಿದ್ದು, ಗುಣಮುಖರ ಸಂಖ್ಯೆ ಏರಿಕೆಯಾಗ್ತಿದೆ. ಇಂದು ರಾಜ್ಯದಲ್ಲಿ ಹೊಸದಾಗಿ 9808 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 27,17,289 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 179 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 32,099 ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು 23,449 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,60,165 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,25,004 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿನಿಂದ ಇಂದು 44 ಮಂದಿ ಮೃತಪಟ್ಟಿದ್ದಾರೆ. ಹೊಸದಾಗಿ 2028 ಮಂದಿಗೆ ಸೋಂಕು ತಗುಲಿದೆ. ಇವತ್ತು 7664 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
‘ಕೊರೊನಾ ವೈರಸ್ ವುಹಾನ್ ಲ್ಯಾಬ್ ನಿಂದಲೇ ಹರಡಿರುವ ಸಾಧ್ಯತೆ ‘ – ಅಮೆರಿಕ ಅಧ್ಯಯನ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.