ಕೋವಿಡ್ ಲಸಿಕೆ ಪಡೆದ ವಿಶ್ವದ ಮೊದಲ ವ್ಯಕ್ತಿ ಸಾವು
ನವದೆಹಲಿ : ದೇಶ ಹಾಗೂ ವಿಶ್ವದಲ್ಲಿ ಕೋವಿಡ್ 2ನೇ ಅಲೆ ಭೀತಿಗೆ ಜನ ತತ್ತರಿಸಿ ಹೋಗಿದ್ದಾರೆ. ಭಾರರತದಲ್ಲಿ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಲಸಿಕೆ ಅಭಿಯಾನವೂ ಇಡೀ ವಿಶ್ವಾದ್ಯಂತ ಜಾರಿಯಲ್ಲಿದೆ. ಹೀಗೆ ಕೋವಿಡ್ ಲಸಿಕೆ ಪಡೆದುಕೊಂಡಿದ್ದ ವಿಶ್ವದ ಮೊದಲ ವ್ಯಕ್ತಿ ಎನಿಸಿಕೊಂಡಿದ್ದ ವಿಲಿಯಮ್ ಷೇಕ್ಸ್ಪಿಯರ್ ಇದೀಗ ನಿಧನ ಹೊಂದಿದ್ದಾರೆ.. 81 ವರ್ಷದ ವಿಲಿಯಮ್ ವಯೋಸಹಜ ಕಾಯಿಲೆಯಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ಕಳೆದ ವರ್ಷ ಡಿಸೆಂಬರ್ 8 ರಂದು ಕೊರೊನಾ ವೈರಸ್ ವಿರುದ್ಧ ಹೋರಾಡಲು ಲಸಿಕೆ ಪಡೆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ವಿಲಿಯಂ ಅವರು ಫೈಜರ್-ಬಯೋಟೆಕ್ ಲಸಿಕೆಯನ್ನು ಪಡೆದ ವಿಶ್ವದ ಮೊದಲ ವ್ಯಕ್ತಿಯಾಗಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.