ಪೋಷಕರೇ ಗಮನಿಸಿ – ಮುಂದಿನ ತಿಂಗಳೇ ಮಕ್ಕಳಿಗೆ ಲಸಿಕೆ..!
ನವದೆಹಲಿ : ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಪ್ರಸ್ತುತ18 ವರ್ಷ ಮೇಲ್ಪಟ್ಟ ಮಕ್ಕಳಿಗೆ ಮಾತ್ರ ಕೊರೊನಾ ಲಸಿಕೆ ನೀಡಲಾಗ್ತಿದೆ.
ಈ ನಡುವೆ ಮಕ್ಕಳಿಗೆ ಇನ್ನೂವರೆಗೂ ಲಸಿಕೆ ನೀಡುವ ಅಭಿಯಾನ ಶುರುವಾಗದೇ ಇರೋದು ಪೋಷಕರ ಆತಂಕಕ್ಕೆ ಕಾರಣವಾಗಿದೆ.. ಇದೀಗ ಪೋಷಕರು ನಿರಾಳರಾಗುವಂತಹ ಸುದ್ದಿಯೊಂದು ಹೊರಬಿದ್ದಿದೆ.. ಆಗಸ್ಟ್ ತಿಂಗಳಲ್ಲಿಯೇ ಮಕ್ಕಳಿಗೆ ಕೊರೊನಾ ಲಸಿಕೆ ಸಿಗಬಹುದು ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಭರವಸೆ ವ್ಯಕ್ತಪಡಿಸಿದ್ದಾರೆ.. ಹೌದು ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಆರೋಗ್ಯ ಸಚಿವರು ಈ ಮಾಹಿತಿಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಸರ್ಕಾರ, ಮುಂದಿನ ತಿಂಗಳಿನಿಂದ ಮಕ್ಕಳಿಗೆ ಲಸಿಕೆ ಹಾಕಲು ಪ್ರಾರಂಭಿಸುವ ಸಾಧ್ಯತೆಯಿದೆ. ಕೊರೊನಾ ಕೊಂಡಿ ಮುರಿಯಲು ಹಾಗೂ ಶಾಲೆ ತೆರೆಯಲು ಲಸಿಕೆ ಮಹತ್ವದ ಪಾತ್ರ ವಹಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಜೈಡಿಸ್ ಕ್ಯಾಡಿಲಾ ಮಕ್ಕಳ ಲಸಿಕೆ ತಯಾರಿಸಿದ್ದು, ತುರ್ತು ಬಳಕೆಯ ಅನುಮೋದನೆಗೆ ಕಾಯ್ತಿದೆ. ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಪ್ರಯೋಗವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್ ವೇಳೆಗೆ ಮಕ್ಕಳ ಮೇಲೆ ಪೂರ್ಣಗೊಳಿಸಬಹುದು. ಫಿಜರ್‌ನ ಲಸಿಕೆ ಯುಎಸ್ ನಿಯಂತ್ರಕದಿಂದ ತುರ್ತು ಬಳಕೆಯ ಅನುಮೋದನೆಯನ್ನು ಪಡೆದಿದೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.