ಕೋವಿಡ್ 2ನೇ ಅಲೆ ಜುಲೈಗೆ ಅಂತ್ಯ – 3ನೇ ಅಲೆ ಯಾವಾಗ ಶುರು – ವಿಜ್ಞಾನಿಗಳು ಹೇಳಿರೋದೇನು..?
ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಭೀತಿಗೆ ಜನ ತತ್ತರಿಸಿ ಹೋಗಿದ್ದಾರೆ. ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ದೇಶದ , ಹಾಗೂ ರಾಜ್ಯ , ಬೆಂಗಳೂರಿನಲ್ಲೂ ಬ್ಲಾಕ್ ಫಂಗಸ್ ವೈರಸ್ ನ ಕಾಟ ಶುರುವಾಗಿದೆ.. ಇದ್ರಿಂದಾಗಿ ಈಗಾಗಲೇ ಹಲವು ಜೀವಗಳು ಹೋಗಿದವೆ. ಹೀಗಾಗಿ ಜನ ಮತ್ತಷ್ಟು ಆತಂಕ್ಕೆ ಒಳಗಾಗಿದ್ದಾರೆ.
ಈ ನಡುವೆ ಒಂದು ಸಮಾಧಾನಕರ ವಿಚಾರ ಗೊತ್ತಾಗಿದೆ.. ಹೌದು ಭಾರತದಲ್ಲಿ ಕೋವಿಡ್ 2ನೇ ಅಲೆಯು ಈ ವರ್ಷದ ಜುಲೈ ವೇಳೆಗೆ ಕುಸಿಯುವ ನಿರೀಕ್ಷೆಯಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಆದ್ರೆ ಮತ್ತೊಂದು ಆಘಾತಕಾರಿ ಸಂಗತಿ ಎಂದರೆ ಮೂರನೇ ಅಲೆಯ ಗಂಡಾಂತರವೂ ಕಾದಿದ್ದು, ಇದರಲ್ಲಿ ಮಕ್ಕಳೇ ಹೆಚ್ಚಾಗಿ ಟಾರ್ಗೆಟ್ ಆಗಲಿದ್ದಾರೆ ಎನ್ನಲಾಗಿದೆ. ಕೊರೊನಾ 3ನೇ ಅಲೆಯು ಸುಮಾರು ಆರರಿಂದ ಎಂಟು ತಿಂಗಳ ಒಳಗೆ ಪರಿಣಾಮ ಬೀರಲಿದೆ ಎನ್ನಲಾಗಿದೆ.
ಭಾರತ ಸರಕಾರದ ವಿಜ್ಞಾನ ಸಚಿವಾಲಯದ ಅಡಿಯಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯು ಸ್ಥಾಪಿಸಿದ ವಿಜ್ಞಾನಿಗಳ ಮೂವರು ಸದಸ್ಯರ ಸಮಿತಿಯು ಈ ಮಾಹಿತಿಯನ್ನ ಹೊರಹಾಕಿದೆ.
ಸೂತ್ರಾ ಮಾದರಿಯನ್ನು ಬಳಸಿಕೊಂಡು, ವಿಜ್ಞಾನಿಗಳು ಮೇ ಅಂತ್ಯದಲ್ಲಿ ದಿನಕ್ಕೆ ಸುಮಾರು 1.5 ಲಕ್ಷ ಪ್ರಕರಣಗಳನ್ನು ಹಾಗೂ ಜೂನ್ ಅಂತ್ಯವು ಪ್ರತಿದಿನ 20,000 ಪ್ರಕರಣಗಳಿಗೆ ಸಾಕ್ಷಿಯಾಗಲಿದೆ ಎಂದು ವಿಜ್ಞಾನಿಗಳು ಊಹಿಸಿದ್ದಾರೆ.
ಉತ್ತರ ಪ್ರದೇಶ, ಕರ್ನಾಟಕ,ಮಹಾರಾಷ್ಟ್ರ, ಮಧ್ಯಪ್ರದೇಶ, ಜಾರ್ಖಂಡ್, ರಾಜಸ್ಥಾನ, ಉತ್ತರಾಖಂಡ, ಗುಜರಾತ್, ಹರಿಯಾಣ, ಕೇರಳ, ಸಿಕ್ಕಿಂ, ದಿಲ್ಲಿ, ಗೋವಾ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕೋವಿಡ್ ಹಾವಳಿ ಅತಿ ಹೆಚ್ಚಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.