ಅನೇಕ ರಾಷ್ಟ್ರಗಳು ಕೋವಿಡ್ ಲಸಿಕೆ ನೀಡುವಲ್ಲಿ ವಿಫಲವಾಗಿವೆ – WHO
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ..
ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಈ ನಡುವೆ ಹಲವು ರಾಷ್ಟ್ರಗಳು ಕೋವಿಡ್ ಲಸಿಕೆ ನೀಡುವಲ್ಲಿ ವಿಫಲವಾಗಿದೆ ಎಂಬ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಡಾ. ಟೆಡ್ರೋಸ್ ಅಧಾನೊಮ್ ಘೆಬ್ರೆಯಸಸ್, ಸೆಪ್ಟೆಂಬರ್ ವೇಳೆಗೆ ಜಗತ್ತಿನ ಎಲ್ಲ ದೇಶಗಳ ಜನಸಂಖ್ಯೆಯ ಶೇಕಡಾ 10ರಷ್ಟು ಜನರಿಗೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಜಗತ್ತಿನೆಲ್ಲೆಡೆ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ವರೆಗೂ ನಾವದನ್ನು ಎಲ್ಲಿಯೂ ಕೊನೆಗೊಳಿಸಲಾಗದು ಎಂದು ಎಚ್ಚರಿಸಿದ್ದಾರೆ. ಇಂಡಿಯಾ ಗ್ಲೋಬಲ್ ಫೋರಂನಲ್ಲಿ ವರ್ಚುವಲ್ ಆಗಿ ಭಾಗವಹಿಸಿದ ಅವರು, ಲಸಿಕೆಗಳ ಲಭ್ಯತೆಯಲ್ಲಿನ ಅಸಮಾನತೆಯು ಸಾಂಕ್ರಾಮಿಕ ರೋಗಕ್ಕೆ ಉತ್ತೇಜನವನ್ನು ನೀಡುತ್ತದೆ. ಕೆಲವು ರಾಷ್ಟ್ರಗಳು ಅಧಿಕ ಮಟ್ಟದ ವ್ಯಾಪ್ತಿಯನ್ನು ತಲುಪಿದ್ದರೂ, ಇನ್ನೂ ಅನೇಕ ರಾಷ್ಟ್ರಗಳಲ್ಲಿ ಆರೋಗ್ಯ ಕಾರ್ಯಕರ್ತರು, ವೃದ್ಧರು ಮತ್ತು ಇತರೆ ಸೋಂಕಿಗೆ ಒಳಗಾಗುವ ಅಪಾಯವಿರುವ ಗುಂಪುಗಳಲ್ಲಿ ಲಸಿಕೆ ಲಭ್ಯವಾಗಿಲ್ಲ ಎಂದು ಹೇಳಿದ್ದಾರೆ.
ಅಲ್ಲದೇ ಕೆಲವು ರಾಷ್ಟ್ರಗಳಿಗೆ ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದಿದ್ದಾಗ ಅದು ಎಲ್ಲ ದೇಶಗಳಿಗೂ ಅಪಾಯಕಾರಿ ಎಂದಿದ್ದಾರೆ. ಸೆಪ್ಟೆಂಬರ್ ವೇಳೆಗೆ ಪ್ರತಿ ದೇಶದ ಜನಸಂಖ್ಯೆಯ ಕನಿಷ್ಠ ಶೇಕಡಾ 10ರಷ್ಟು, ವರ್ಷಾಂತ್ಯಕ್ಕೆ ಶೇಕಡಾ 40ರಷ್ಟು ಮತ್ತು ಮುಂದಿನ ವರ್ಷ ಮಧ್ಯಂತರ ಅವಧಿಯಲ್ಲಿ ಕನಿಷ್ಠ 70ರಷ್ಟು ಮಂದಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಪ್ರಕಾರ ವಿಶ್ವದಾದ್ಯಂತ 18.2 ಕೋಟಿ ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಸರಿ ಸುಮಾರು 40 ಲಕ್ಷ ಜನರು ಮೃತಪಟ್ಟಿದ್ದಾರೆ. ಭಾರತದಲ್ಲಿ 3 ಕೋಟಿಗೂ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿದ್ದು, ನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.