ಜಗತ್ತು ಈಗ 3ನೇ ಅಲೆಯ ಆರಂಭಿಕ ಹಂತದಲ್ಲಿದೆ : WHO ಮುಖ್ಯಸ್ಥ
ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ನಡುವೆ ಜಗತ್ತು ಈಗ ಕೋವಿಡ್-19 ಮೂರನೇ ಅಲೆಯ ಆರಂಭಿಕ ಹಂತದಲ್ಲಿದೆ ಎಂದು WHO ಮಹಾನಿರ್ದೇಶಕ ಟೆಡ್ರಾಸ್ ಅದನಾಮ್ ಗೇಬ್ರಿಯೇಸಸ್ ಗುರುವಾರ ಎಚ್ಚರಿಸಿದ್ದಾರೆ.
ಜಗತ್ತಿನಾದ್ಯಂತ ಡೆಲ್ಟಾ ಪ್ರಭೇದದ ಸೋಂಕು ಹೆಚ್ಚುತ್ತಿರುವಂತೆಯೇ ಅವರು ಈ ಹೇಳಿಕೆ ನೀಡಿದ್ದಾರೆ. ‘ದುರದೃಷ್ಟವಶಾತ್ ನಾವೀಗ ಮೂರನೇ ಅಲೆಯ ಆರಂಭಿಕ ಹಂತದಲ್ಲಿದ್ದೇವೆ’ ಎಂದು ಹೇಳಿದ್ದಾರೆ. ಅಲ್ಲದೇ ಡೆಲ್ಟಾ ಪ್ರಭೇದದ ಸೋಂಕು ಹರಡುತ್ತಿದೆ. ಅದರ ಜೊತೆಗೆ ಹೆಚ್ಚುತ್ತಿರುವ ಜನಸಂಚಾರ ಮತ್ತು ಸಾರ್ವಜನಿಕ ಆರೋಗ್ಯ ಕ್ರಮಗಳ ಅಸಮರ್ಪಕ ಬಳಕೆಯೂ ಸೇರಿಕೊಂಡಿದೆ. ಇದು ಸೋಂಕು ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಲಿದೆ ಎಂದು ಹೇಳಿದ್ದಾರೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
2030ಕ್ಕೆ ಭಯಾನಕ ಪ್ರವಾಹದ ಎಚ್ಚರಿಕೆ : ವಿನಾಶದ ಬಗ್ಗೆ ಮಾಹಿತಿ ಕೊಟ್ಟ ಸಂಶೋಧನೆ – ನಾಸಾ ಹೇಳಿದ್ದೇನು..?
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.