ಮಾನ ಮರ್ಯಾದೆ ಗೌರವದ ಕಾರಣಕ್ಕಾಗಿ ಕೋರ್ಟ್ ಮೊರೆ : ಸಿ.ಪಿ.ಯೋಗೇಶ್ವರ್

1 min read
CP Yogeshwar

ಮಾನ ಮರ್ಯಾದೆ ಗೌರವದ ಕಾರಣಕ್ಕಾಗಿ ಕೋರ್ಟ್ ಮೊರೆ

ಮೈಸೂರು : ಮಾನ ಮರ್ಯಾದೆ ಗೌರವದ ಕಾರಣಕ್ಕಾಗಿ ಕೋರ್ಟ್ ಮೊರೆ. ಸುಳ್ಳು ಬೇಗವಾಗಿ ಹರಡುತ್ತದೆ. ಅದು ಸುಳ್ಳು ಎಂದು ಸಾಬೀತಾಗಲು ಸಮಯ ಬೇಕು. ಆದರೆ ಮಾಧ್ಯಮದಲ್ಲಿ ಬಂದ ಕೂಡಲೇ ಅದನ್ನು ಜನ ನಂಬುತ್ತಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ಸಚಿವರು ಕೋರ್ಟ್ ಮೊರೆ ಹೋಗಿರುವ ಬಗ್ಗೆ ಮೈಸೂರಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆಧುನಿಕ ಯುಗದ ಗ್ರಾಫಿಕ್ಸ್‍ಗೆ ಬಲಿಪಶು ಆಗುವ ಭಯ ನಮಗೆ ಕಾಡುತಿದೆ. ಇದು ಗ್ರಾಫಿಕ್ ಯುಗ ಅದಕ್ಕಾಗಿ ಮಾನ ಮರ್ಯಾದೆಗೆ ಅಂಜಿದ್ದೇವೆ. ದೃಶ್ಯ ಮಾಧ್ಯಮಗಳನ್ನು ತಿರುಚುವ ಧ್ವನಿ ನೀಡುವ ಕೆಲಸ ಆಗುತ್ತಿದೆ. ಗ್ರಾಫಿಕ್ ಮೂಲಕ ಕೈ ಕಾಲು ತಲೆ ಕತ್ತರಿಸಿದಂತೆ ಮಾಡಬಹುದು. ಸಿನಿಮಾದಿಂದ ಬಂದ ನನಗೆ ಅದೆಲ್ಲಾ ಗೊತ್ತಿದೆ ಎಂದು ಹೇಳಿದ್ದಾರೆ.

CP Yogeshwar

ಇನ್ನು ಮಾನ ಮರ್ಯಾದೆ ಗೌರವದ ಕಾರಣಕ್ಕಾಗಿ ಕೋರ್ಟ್ ಮೊರೆ ಹೋಗಿದ್ದೇವೆ. ಸುಳ್ಳು ಬೇಗವಾಗಿ ಹರಡುತ್ತದೆ. ಅದು ಸುಳ್ಳು ಎಂದು ಸಾಬೀತಾಗಲು ಸಮಯ ಬೇಕು. ಆದರೆ ಮಾಧ್ಯಮದಲ್ಲಿ ಬಂದ ಕೂಡಲೇ ಅದನ್ನು ಜನ ನಂಬುತ್ತಾರೆ. ಆದರೆ ಸತ್ಯ ಹೊರಬರುವುದು ಪೊಲೀಸ್ ತನಿಖೆಯಿಂದ, ನ್ಯಾಯಲಯದ ಮೂಲಕ. ಆದ್ರೆ ಅದಕ್ಕಿಂತ ಮುಂಚೆ ಮಾಧ್ಯಮದಲ್ಲಿ ಬಂದ್ರೆ ಘಾಸಿ ಜಾಸ್ತಿ ಆಗುತ್ತೆ. ಅದಕ್ಕಾಗಿ ನಾವೆಲ್ಲಾ ಭಯಪಡುತ್ತಿದ್ದೇವೆ ಎಂದು ತಿಳಿಸಿದರು.

ಮೈಸೂರು ಪ್ರವಾಸೋದ್ಯಮವನ್ನ ಬ್ರಾಂಡ್ ಮೈಸೂರು ಹೆಸರಿನಲ್ಲಿ ಮಾಡಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಚರ್ಚೆಗಾಗಿ ಪದೇ ಪದೇ ಮೈಸೂರಿಗೆ ಬರುತ್ತಿದ್ದೇನೆ. ಇದನ್ನ ಹೊರತುಪಡಿಸಿ ಇನ್ಯಾವ ರಾಜಕೀಯ ಉದ್ದೇಶ ಇಲ್ಲ. ನಾನು ರಾಮನಗರ ಉಸ್ತುವಾರಿ ಕೊಡಿ ಎಂದು ಕೇಳಿದ್ದೇನೆ. ಆದರೆ ಸಿಎಂ ಈ ಬಗ್ಗೆ ಇನ್ನು ಸ್ಪಷ್ಟಪಡಿಸಿಲ್ಲ. ಮೈಸೂರು ಉಸ್ತುವಾರಿ ಸಚಿವನಾಗುವ ಉದ್ದೇಶದಿಂದ ಮೈಸೂರಿಗೆ ಬರುತ್ತಿಲ್ಲ. ರಾಜ್ಯದ ಪ್ರವಾಸೋದ್ಯಮ ಬಹಳ ಹಿಂದೆ ಇದೆ. ಮೈಸೂರಿಗೆ ಬರುವ ಪ್ರವಾಸಿಗರಿಗೆ ಇಲ್ಲಿನ ವ್ಯವಸ್ಥೆ ಬಗ್ಗೆ ನಿರಾಸೆಯಾಗುತ್ತಿದೆ. ಇದನ್ನೆಲ್ಲ ನಿವಾರಿಸುವ ದೃಷ್ಟಿಯಿಂದ ವಿವಿಧ ಯೋಜನೆ ರೂಪಿಸಿದ್ದೇನೆ. ಆ ಕೆಲಸದಿಂದ ಮೈಸೂರು ಬರುತ್ತಿದ್ದೇನೆ ಎಂದು ಮೈಸೂರು ಉಸ್ತುವಾರಿ ಬಗ್ಗೆ ಸ್ಪಷ್ಟನೆ ನೀಡಿದರು.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd