ಬಿಎಸ್ ವೈ ಬಗ್ಗೆ ಮಾತನಾಡಿದ್ರೆ ಸುಟ್ಟು ಹೋಗ್ತೀವಿ : ಸಿ.ಪಿ.ಯೋಗೇಶ್ವರ್
ಕೊಪ್ಪಳ : ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ನನ್ನನ್ನು ವಿಲನ್ ಮಾಡಬೇಡಿ, ಅವರ ವಿರುದ್ಧ ಮಾತನಾಡಿದ್ರೆ ನಾವು ಸುಟ್ಟು ಹೋಗ್ತೀವಿ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರು ನಮ್ಮ ನಾಯಕರು. ಅವರನ್ನು ನಾವ ಟಾರ್ಗೆಟ್ ಮಾಡಲ್ಲ.
ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಕೆಲಸವನ್ನೂ ನಾವು ಮಾಡುತ್ತಿಲ್ಲ.ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ನನ್ನನ್ನು ವಿಲನ್ ಮಾಡಬೇಡಿ, ಅವರ ವಿರುದ್ಧ ಮಾತನಾಡಿದ್ರೆ ನಾವು ಸುಟ್ಟು ಹೋಗ್ತೀವಿ ಎಂದರು.
ಇನ್ನು ನಮ್ಮ ದೆಹಲಿ ಭೇಟಿ ವಿಚಾರ, ನಮ್ಮಲ್ಲಿ ಆಂತರಿಕ ಸಮಸ್ಯೆಗಳು ಇವೆ. ಹಾಗಾಗಿ ನಾಯಕರ ಮುಂದೆ ಹೇಳಿಕೊಳ್ಳಲು ಹೋಗುತ್ತಿದ್ದೇವೆ ವಿನಃ ಬೇರೆ ವಿಷಯವಲ್ಲ ಎಂದು ದೆಹಲಿ ಭೇಟಿ ಬಗ್ಗೆ ಸ್ಪಷ್ಟನೆ ನೀಡಿದರು.
ಶಾಸಕ ಯತ್ನಾಳ್ ಭೇಟಿ ವಿಚಾರವಾಗಿ ಮಾತನಾಡಿ, ಯತ್ನಾಳ್ ಹಾಗೂ ನಾವು ಸಮಕಾಲಿನರು ಹಾಗಾಗಿ ಅವರನ್ನು ಭೇಟಿ ಮಾಡಿದ್ದೇನೆ.
ಮತ್ತ್ಯಾವ ವಿಚಾರವೂ ಇಲ್ಲ ಎಂದು ಸ್ಪಷ್ಟಪಡಿಸಿದರು.ನಾವು ಪರೀಕ್ಷೆ ಬರೆದಿದ್ದೇವೆ. ಫಲಿತಾಂಶ ಯಾವಾಗ ಬರುತ್ತೆ ಎಂದು ನೋಡೋಣ. ಪಕ್ಷದ ಹಿರಿಯರು ಯಾವಾಗ ತೀರ್ಮಾನ ಮಾಡ್ತಾರೋ ಆವಾಗ ಬರುತ್ತದೆ ಎಂದರು.









