‘ಬಿಜೆಪಿ ವಿರೋಧಿ ಏಕೈಕ ಶಕ್ತಿಯಾಗಿ ಟಿಎಂಸಿಯನ್ನು ಆಯ್ಕೆ ಮಾಡಿದ ಜನ ಕಾನೂನು ಸುವ್ಯವಸ್ಥೆ ವಿಚಾರ ಮರೆತರು’ – ಸಿಪಿಎಂ
ಕೊಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಈ ಬಾರಿಯ ವಿಧಾನಸಭಾ ಸಬಾ ಚುನಾವಣೆಯಲ್ಲಿ TMC ಭರ್ಜರಿ ಜನ ದಾಖಲಿಸಿದೆ. ಈ ಮೂಲಕ ಮತ್ತೊಮ್ಮೆ ದೀದಿ ಸಿಎಂ ಆಗಿದ್ದಾರೆ..
ಹೀಗೆ ಬಿಜೆಪಿಯ ವಿರುದ್ಧ ಏಕೈಕ ಶಕ್ತಿಯಾಗಿ ಜನ ಟಿಎಂಸಿಯನ್ನು ಆಯ್ಕೆ ಮಾಡಿಕೊಂಡರು. ಆದರೆ, ಭ್ರಷ್ಟಾಚಾರ ಮತ್ತು ಕಾನೂನು ಸುವ್ಯವಸ್ಥೆ ವಿಚಾರವನ್ನು ಮರೆತರು ಎಂದು ಸಿಪಿಐಎಂ ಅಭಿಪ್ರಾಯಪಟ್ಟಿದೆ.
ಎಡಪಂಥೀಯ, ಕಾಂಗ್ರೆಸ್ ಮತ್ತು ಐಎಸ್ಎಫ್ ಒಳಗೊಂಡ ಸಂಯುಕ್ತ ಮೋರ್ಚಾ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದೆ. ಒಕ್ಕೂಟವು ಮತದಾರರ ಮನ್ನಣೆ ಗಳಿಸುವಲ್ಲಿ ವಿಫಲವಾಗಿದೆ ಎಂದು ಸಿಪೆಂ ಹೇಳಿಕೊಂಡಿದೆ.
ರಾಜಕೀಯ ಮತ್ತು ಸಂಘಟನಾತ್ಮಕ ಕಾರಣಗಳಿಂದ ನಮ್ಮ ಮೈತ್ರಿಕೂಟಕ್ಕೆ ಸೋಲಾಗಿದೆ. ರಾಜ್ಯದ ಜನರಿಗೆ ನಮ್ಮ ಕೂಟದ ನೀತಿಗಳ ಬಗ್ಗೆ ವಿಶ್ವಾಸವಿರಲಿಲ್ಲ. ಪರ್ಯಾಯ ಸರ್ಕಾರ ರಚಿಸುವ ನಮ್ಮ ಪ್ರಯತ್ನವನ್ನು ಜನ ತಿರಸ್ಕರಿಸಿದ್ದಾರೆ ಎಂದು ಹೇಳಿಕೊಂಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.