ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಚಕ್ರವ್ಯೂಹದಲ್ಲಿ ಕ್ರಿಕೆಟ್ ಕಿಂಕರ ಕೊಹ್ಲಿ..!

Mahesh M Dhandu by Mahesh M Dhandu
December 22, 2021
in Newsbeat, Sports, ಕ್ರೀಡೆ
virat kohli team india saakshatv

COLOMBO, SEP 3 :- India's team captain Virat Kohli celebrates his half century.during Sri Lanka v/s India - Fifth One Day International Match - Colombo, Sri Lanka - September 3, 2017 REUTERS-28R

Share on FacebookShare on TwitterShare on WhatsappShare on Telegram

ಚಕ್ರವ್ಯೂಹದಲ್ಲಿ ಕ್ರಿಕೆಟ್ ಕಿಂಕರ ಕೊಹ್ಲಿ..! Kohli saakshatv

ಕ್ರಿಕೆಟ್ ರಾಕ್ಷಸ ವಿರಾಟ್ ಕೊಹ್ಲಿ ಸದ್ಯ ಗಾಯಗೊಂಡಿರುವ ಹೆಬ್ಬುಲಿಯಂತೆ ಆಗಿದ್ದಾರೆ. ಒಂದು ಕಡೆ ನಾಯಕತ್ವದಿಂದ ವಜಾಗೊಳಿಸಿ ಅವಮಾನಿಸದವರಿಗೆ ಮತ್ತೊಂದು ಕಡೆ ತಮ್ಮ ಬ್ಯಾಟಿಂಗ್ ಪಾರ್ಮ್ ಬಗ್ಗೆ ಟೀಕಿಸುತ್ತಿವವರಿಗೆ ಉತ್ತರ ನೀಡಲೇಬೇಕಾದ ಒತ್ತಡದಲ್ಲಿದ್ದಾರೆ.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಮೈದಾನದಲ್ಲಿ ಸಿಂಹದ ಘರ್ಜಸಿ ಎದುರಾಗಳಿಗಳ ಶಿಕಾರಿ ಆಡುತ್ತಿದ್ದ ವಿರಾಟ್ ಸದ್ಯ ತುಸು ಮಂಕಾಗಿದ್ದಾರೆ. ತಮ್ಮನ್ನು ಕೆಣಕಿದವರ ವಿರುದ್ಧ ರೆಡ್ ಬುಲ್ ನಂತೆ ಕಾಲ್ಕೆರೆದು ನಿಲ್ಲುತ್ತಿದ್ದ ಕೊಹ್ಲಿ ಈಗ ಗುಪ್ ಚುಪ್ ಆಗಿದ್ದಾರೆ.

ಹೌದು..! ವಿರಾಟ್ ಕೊಹ್ಲಿ  ಅಂದರೇ ಎಲ್ಲರ ಕಣ್ಣ ಮುಂದೆ ಬರೋದು ಅವರ ರೋಷವೇಶ.. ಕ್ರಿಕೆಟ್ ಮಾದರಿಗಳ ಬೇದವಿಲ್ಲದೇ, ಸ್ವದೇಶಿ – ವಿದೇಶಿ ಅನ್ನೋ ಲೆಕ್ಕಾಚಾರ ವಿಲ್ಲದೇ ಆನೆ ನಡೆದಿದ್ದೇ ದಾರಿ ಎಂಬಂತೆ ವಿರಾಟ್ ಕೊಹ್ಲಿ ಘೀಳಿಡುತ್ತಿದ್ದರು. ಆದ್ರೆ ಈಗ ವಿರಾಟ್ ಆ ಅಬ್ಬರ, ಆರ್ಭಟ ಕಾಣೆಯಾಗಿದೆ. ಇದಕ್ಕೆ ಕಾರಣ ವಿರಾಟ್ ಅನುಭವಿಸುತ್ತಿರುವ ಬ್ಯಾಟಿಂಗ್ ವೈಫಲ್ಯ..

ವಿರಾಟ್ ಕೊಹ್ಲಿ ಮೈದಾನಕ್ಕೆ ಇಳಿದರೇ ಅಲ್ಲಿ ಹೊಸ ದಾಖಲೆ ನಿರ್ಮಾಣವಾಗುತ್ತಿತ್ತು. ಇಲ್ಲಾ ಇತಿಹಾಸದ ಪುಟಗಳಲ್ಲಿದ್ದ ದಾಖಲೆ ಚಿಂದಿಯಾಗುತ್ತಿತ್ತು. ಆದ್ರೆ ಕಳೆದ ಎರಡು ವರ್ಷಗಳಿಂದ ವಿರಾಟ್ ಕಷ್ಟದ ಕಾಲವನ್ನು ಎದುರಿಸುತ್ತಿದ್ದಾರೆ. ಈ ಹಿಂದೆ ಸೆಂಚೂರಿಗಳ ಮೇಲೆ ಸೆಂಚೂರಿಗಳನ್ನು ಸಿಡಿಸುತ್ತಿದ್ದ ವಿರಾಟ್ ಈಗ ಒಂದೇ ಒಂದು ಸೆಂಚೂರಿ ಸಿಡಿಸಿ ವರ್ಷಗಳೇ ಕಳೆದಿವೆ.

Kohli saakshatv

ಆಸ್ಟ್ರೇಲಿಯಾ ಪ್ರವಾಸದಲ್ಲಾಗಲೀ, ಇಂಗ್ಲೆಂಡ್ ಪ್ರವಾಸದಲ್ಲಾಗಲೀ, ನ್ಯೂಜಿಲೆಂಡ್‌ನಲ್ಲಾಗಲೀ ಕೊಹ್ಲಿ ಬ್ಯಾಟ್ ಆಗಸ ನೋಡಲೇ ಇಲ್ಲ. ವಿರಾಟ್ ಕೊಹ್ಲಿ 70 ಶತಕಗಳಿಗೆ ಅಂಟಿಕೊಂಡಿದ್ದಾರೆ.  ಕಳೆದ ಎರಡು ವರ್ಷಗಳಿಂದ ಶತಕದ ಸಂಭ್ರಮ ಆಚರಿಸಿಕೊಳ್ಳದ ವಿರಾಟ್, ದಕ್ಷಿಣಾ ಆಫ್ರಿಕಾದ ನೆಲದಲ್ಲಿ ಅಬ್ಬರಿಸಲೇಬೇಕು. ಹೀಗಾಗಿಯೇ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ವಿರಾಟ್ ನೆಟ್ಸ್ ಗಳಲ್ಲಿ ಬೆವರಿಳಿಸುತ್ತಿದ್ದಾರೆ.

ದ್ರಾವಿಡ್ ಸಮ್ಮುಖದಲ್ಲಿ ಗಂಟೆಗಟ್ಟಲೇ ಬ್ಯಾಟಿಂಗ್ ಪ್ರಾಕ್ಟೀಸ್ ಮಾಡುತ್ತಿರುವ ವಿರಾಟ್,  ರಾಹುಲ್ ಅವರಿಂದ ಬ್ಯಾಟಿಂಗ್ ಟಿಪ್ಸ್ ಪಡೆದುಕೊಳ್ಳುತ್ತಿದ್ದಾರೆ.

ಇದಲ್ಲದೇ ಏಕದಿನ ನಾಯಕತ್ವದಿಂದ ವಜಾಗೊಂಡು ಅವಮಾನ ಅನುಭವಿಸಿರುವ ವಿರಾಟ್ ತಮ್ಮ ನಾಯಕತ್ವದ ತಾಕತ್ತನ್ನ ಮತ್ತೆ ತೋರಿಸಲೇಬೇಕಿದೆ. ಇಂಗ್ಲೆಂಡ್ ನೆಲದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಜಯ ಸಾಧಿಸಿರುವ ವಿರಾಟ್, ಆಫ್ರಿಕಾ ನೆಲದಲ್ಲಿ ಗಗನ ಕುಸುಮವಾಗಿರುವ ಟೆಸ್ಟ್ ಸರಣಿ ಟ್ರೋಫಿ ಗೆದ್ದು ಬಿಸಿಸಿಐಗೆ ದಿಟ್ಟ ಉತ್ತರ ನೀಡಬೇಕಾಗಿದೆ.

ಒಟ್ಟಾರೆ ದಕ್ಷಿಣ ಆಫ್ರಿಕಾ ನೆಲದಲ್ಲಿ ವಿರಾಟ್ ಕೊಹ್ಲಿ, ಕರ್ಮೋಡಗಳನ್ನು ಸೀಳುತ್ತಾ..  ಚಕ್ರವ್ಯೂಹವನ್ನ ಬೇಧಿಸಿ ಗುಡುಗು ಸಿಡಿಲುಗಳ ದಿಬ್ಬಣ ನಡೆಸಲೇಬೇಕಿದೆ.

Tags: #Saaksha TVRahul Dravidvirat kohli
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram