ಈ ಬಾರಿಯ ಮೈಸೂರು ವಿಶ್ವವಿದ್ಯಾನಿಲಯ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿಗೆ ಭಾರತದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಭಾಜನರಾಗಿದ್ದಾರೆ.
ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ 103ನೇ ಘಟಿಕೋತ್ಸವದ ಹಿನ್ನೆಲೆಯಲ್ಲಿ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಅದರಂತೆ ಅ.18ರಂದು ನಡೆಯಲಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಐಸಿಸಿ ಮ್ಯಾಚ್ ರೆಫ್ರಿ ಜಾಗವಲ್ ಶ್ರೀನಾಥ್ ಸೇರಿದಂತೆ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ, ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಶ್ರಾಂತ ವೈದ್ಯಕೀಯ ಪ್ರಾಧ್ಯಾಪಕ ನಾಡೋಜ ಡಾ.ಪಿ.ಎಸ್ ಶಂಕರ್ ಅವರುಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ಮೈಸೂರು ವಿಶ್ವವಿದ್ಯಾನಿಲಯ ತೀರ್ಮಾನಿಸಿದೆ.
ಮೈಸೂರು ವಿವಿಯ ವಾರ್ಷಿಕ ಘಟಿಕೋತ್ಸವ ಸಮಾರಂಭ ಅ.18ರಂದು ಬೆಳಗ್ಗೆ 10.30ಕ್ಕೆ ವಿವಿಯ ಘಟಿಕೋತ್ಸವ ಭವನದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆವಹಿಸಲಿದ್ದು, ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾನಿರ್ದೇಶಕ ಪದ್ಮವಿಭೂಷಣ ಡಾ. ವಾಸುದೇವ್ ಕೆ. ಅತ್ರೆ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಇವರೊಂದಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಎನ್.ಕೆ.ಲೋಕನಾಥ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
Cricket, University of Mysore, Javagal Srinath, Former Cricketer