Cricket : ಜೂನ್ 23. 2013 ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನೆನಪು

1 min read

ಜೂನ್ 23. 2013 ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನೆನಪು
2013 : ಐಸಿಸಿ ಚಾಂಪಿಯನ್ಸ್ ಟ್ರೋಫಿ : ಇಂಗ್ಲೆಂಡ್ ತಂಡಕ್ಕೆ ಸೋಲು
ಎರಡನೇ ಬಾರಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದ ಭಾರತ
ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಗೆಲುವು
ಈ ಪ್ರಶಸ್ತಿ ಗೆದ್ದ ನಂತರ ಯಾವುದೇ ಐಸಿಸಿ ಪ್ರಶಸ್ತಿಗಳನ್ನು ಗೆದ್ದುಕೊಂಡಿಲ್ಲ

ಜೂನ್ 23. 2013. ಈ ದಿನ ಟೀಮ್ ಇಂಡಿಯಾಗೆ ವಿಶ್ವಕಪ್ ಗೆದ್ದಷ್ಟೇ ಸಂಭ್ರಮವಿದೆ. ಅಷ್ಟೇ ಸಂತಸವೂ ಇದೆ.
ಕಾರಣ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಬರೆದ ದಿನ.
ಹೌದು, ಜೂನ್ 23, 2013ರಂದು ಟೀಮ್ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿತ್ತು. ಅಲ್ಲದೆ ಎರಡನೇ ಬಾರಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತ್ತು. ವಿಪರ್ಯಾಸ ಅಂದ್ರೆ ಈ ಪ್ರಶಸ್ತಿ ಗೆದ್ದ ನಂತರ ಟೀಮ್ ಇಂಡಿಯಾ ಯಾವುದೇ ಐಸಿಸಿ ಪ್ರಶಸ್ತಿಗಳನ್ನು ಗೆದ್ದುಕೊಂಡಿಲ್ಲ.
ಇನ್ನು ಟೀಮ್ ಇಂಡಿಯಾದ ನಾಯಕನಾಗಿದ್ದ ಮಹೇಂದ್ರ ಸಿಂಗ್ ಧೋನಿ ಅವರು ಈ ಪ್ರಶಸ್ತಿ ಗೆಲ್ಲುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಮೂರು ಬಾರಿ ಐಸಿಸಿ ಪ್ರಶಸ್ತಿ ಪಡೆದ ಮೊದಲ ನಾಯಕ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.
ಮಳೆಯಿಂದಾಗಿ ಈ ಪಂದ್ಯವನ್ನು 20 ಓವರ್ ಗಳಿಗೆ ಸೀಮಿತಗೊಳಿಸಲಾಗಿತ್ತು. ಆದ್ರೆ ಟೀಮ್ ಇಂಡಿಯಾದ ಬ್ಯಾಟರ್ ಗಳು ಉತ್ತಮ ರನ್ ಗಳಿಸಲು ಪರದಾಟ ನಡೆಸಿದ್ರು. ಅಂತಿಮವಾಗಿ ವಿರಾಟ್ ಕೊಹ್ಲಿ 43 ರನ್ ಮತ್ತು ರವೀಂದ್ರ ಜಡೇಜಾ ಅಜೇಯ 33 ರನ್ ಗಳಿಸಿದ್ರು. ಪರಿಣಾಮ ಟೀಮ್ ಇಂಡಿಯಾ ಏಳು ವಿಕೆಟ್ ಗೆ ನಷ್ಟಕ್ಕೆ 129 ರನ್ ಗಳಿಸಿತ್ತು.
ಸುಲಭ ಸವಾಲನ್ನು ಬೆನ್ನಟ್ಟಿದ್ದ ಇಂಗ್ಲೆಂಡ್ ಉತ್ತಮ ಆರಂಭ ಪಡೆದ್ರೂ ನಂತರ ಆಘಾತದ ಮೇಲೆ ಆಘಾತ ಅನುಭವಿಸಿತ್ತು. ಅಂತಿಮವಾಗಿ ಎಂಟು ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿ ರನ್ ಗಳಿಂದ ಸೋಲು ಅನುಭವಿಸಿತ್ತು. ಆಲ್ ರೌಂಡ್ ಆಟವನ್ನಾಡಿದ್ದ ರವೀಂದ್ರ ಜಡೇಜಾ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದರು.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd