ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿ ಮೇಲೆ ಅಪ್ರಾಪ್ತರಿಂದ ಅತ್ಯಾಚಾರ
ಮುಂಬೈ : ಕೇಟರಿಂಗ್ ಕೆಸ ಮುಗಿಸಿ ಮನೆಗೆ ವಾಪಸ್ ತೆರಳುತ್ತಿದ್ದ 19 ವರ್ಷದ ಯುವತಿಯನ್ನ ಎಳೆದೊಯ್ದು ನಾಲ್ವರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಗೋವಂಡಿ ಪ್ರದೇಶದಲ್ಲಿ ನಡೆದಿದೆ.. ನಿನ್ನೆ ಬೆಳಿಗ್ಗೆ ಪ್ರಕರಣ ನಡೆದಿದ್ದು, ಇಂದು ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ತಲೆ ಮರೆಸಿಕೊಂಡಿರುವ ಒಬ್ಬಿನಿಗಾಗಿ ಹುಡುಕಾಟ ಜಾರಿಯಲ್ಲಿದೆ.
ಕೆಲಸ ಮಾಡುತ್ತಿರುವ ಯುವತಿ ಶನಿವಾರ ಮುಂಜಾನೆ 4.30ರ ಸುಮಾರಿಗೆ ಮನೆಗೆ ವಾಪಸ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಮೂವರೂ ಅಪ್ರಾಪ್ತ ಆರೋಪಿಗಳನ್ನ ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ಅಪರಾಧದಲ್ಲಿ ಶಾಮೀಲಾಗಿದ್ದ ಎನ್ನಲಾದ ಮತ್ತೊಬ್ಬನ ಹುಡುಕಾಟಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕೇಟರಿಂಗ್ ಕೆಲಸ ಮಾಡುತ್ತಿರುವ ಯುವತಿ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಳು. ಆಗ ಆಕೆಯನ್ನು ತಡೆದು ಆರೋಪಿ ನಿನ್ನೊಂದಿಗೆ ಮಾತನಾಡಬೇಕು ಎಂದಿದ್ದ. ನಂತರ ಆರೋಪಿ ಯುವತಿಯನ್ನು ಕೊಳೆಗೇರಿ ಕೊಠಡಿಯ ಮೇಲಂತಸ್ತಿಗೆ ಕರೆದೊಯ್ದಿದ್ದಾನೆ. ಅಲ್ಲಿ ಆತನ ಸ್ನೇಹಿತರು ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸಂತ್ರಸ್ತೆ ಪೊಲೀಸರಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಪೊಲೀಸರು ವಿವಿಧ ಸೆಕ್ಸಸ್ ಗಳ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ನಂತರ ಮೂವರು ಅಪ್ರಾಪ್ತರನ್ನ ಅರೆಸ್ಟ್ ಮಾಡಿದ್ದಾರೆ.
ಸ್ಥಳೀಯ ಗುಪ್ತಚರ ನೀಡಿದ ವಿವರಣೆಯನ್ನು ಆಧರಿಸಿ, ನಾಲ್ವರು ಆರೋಪಿಗಳ ಗುರುತನ್ನು ಪತ್ತೆಹಚ್ಚಿದ್ದೇವೆ. ಶನಿವಾರ ಮಧ್ಯಾಹ್ನ ರೈಲಿನಲ್ಲಿ ಉತ್ತರ ಪ್ರದೇಶದ ಬಸ್ತಿಗೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದ ಮೂವರು ಅಪ್ರಾಪ್ತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.