ಆಂಬುಲೆನ್ಸ್ ಚಾಲಕನಿಂದ ಕೊರೊನಾ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ
ಕಲಬುರಗಿ : ಕಲಬುರಗಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.. ಕೊರೋನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕಲಬುರಗಿಯ ಬ್ರಹ್ಮಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಖಾಸಗಿ ಆಂಬುಲೆನ್ಸ್ ಚಾಲಕನ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ.
ಇನ್ನೂ ಸಂತ್ರಸ್ತೆ ಎಂದು ಹೇಳಲಾಗಿರುವ ಕೊರೋನಾ ಸೋಂಕಿತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಯುವತಿ ರಾತ್ರಿ ಮಲಗಿದ್ದ ವೇಳೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಆಕೆ ಕಿರಿಚಾಡಿದ ಹಿನ್ನೆಲೆ ಆರೋಪಿ ಗಾಬರಿಗೊಂಡು ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








