ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ
ಬೆಂಗಳೂರು : ಇಬ್ಬರು ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ಆರಂಭವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಇಂತಹದೊಂದು ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವಕನೋರ್ವ ತನ್ನ ಸ್ನೇಹಿತ ತನಗೆ ಪಬೈದ ಎಂಬ ಸಣ್ಣ ಕಾರಣಕ್ಕೆ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ.
ವೆಂಕಟೇಶ್ವರ ಲೇಔಟ್ ನಿವಾಸಿ ಫರಾನ್ (26) ಕೊಲೆಯಾದ ಯುವಕ. ಚಿಕನ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪರಾನ್ ರಾತ್ರಿ 10 ಗಂಟೆಯ ಸಮಯದಲ್ಲಿ ಕ್ಷುಲ್ಲಕ ವಿಚಾರವಾಗಿ ಸ್ನೇಹಿತನ ಜತೆ ಜಗಳವಾಗಿದೆ. ಇದೇ ಕೋಪಕ್ಕೆ ಆರೋಪಿ ಚಾಕುವಿನಿಂದ ಫರಾನ್ ಕುತ್ತಿಗೆಗೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.