ಹಾಸನ: ಯುವನೊಬ್ಬನನ್ನು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ. 25 ವರ್ಷದ ಪುನೀತ್ ಎಂಬ ಯುವಕ ಮೃತ ದುರ್ದೈವಿಯಾಗಿದ್ದಾನೆ.
ಬೇಡಿಗನಹಳ್ಳಿಗೆ ಕೆರೆ ಏರಿ ಮೇಲೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಹಳೇ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಎಸ್ಪಿ ಆರ್.ಶ್ರೀನಿವಾಸ್ ಗೌಡ, ಹೊಳೆನರಸೀಪುರ ಡಿವೈಎಸ್ಪಿ ಲಕ್ಷ್ಮೇಗೌಡ, ಸಿಪಿಐ ಕುಮಾರ್ ಹಾಗೂ ಪಿಎಸ್‌ಐ ವಿನೋದ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹವನ್ನು ರವಾನಿಸಲಾಗಿದೆ.