ಕಲಬುರಗಿ : ಕೆಲಸದಲ್ಲಿ ಒತ್ತಡ (Work Pressure)ದ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ನಗರದ (Kalaburagi) ನಗರದ ವಿಶ್ವವಿದ್ಯಾಲಯ ಆವರಣದ ಪಾಳು ಬಿದ್ದ ಗೋಡಾನ್ನ ಲ್ಲಿ ನಡೆದಿದೆ. ನಗರದ ಜ್ಯೋತಿಬಾ ಪುಲೆ ಬಡಾವಣೆಯ ನಿವಾಸಿ ಶಶಾಂಕ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈ ಯುವಕ ಆನ್ ಲೈನ್ ಎನಿಮೇಶನ್ ಕೆಲಸ ಮಾಡುತ್ತಿದ್ದನು.
ಆನ್ಲೈನ್ ಎನಿಮೇಶನ್ (Online Animation) ಕೆಲಸದಲ್ಲಿ ಬಹಳಷ್ಟು ಒತ್ತಡ ಆಗಿದ್ದರ ಹಿನ್ನೆಲೆಯಲ್ಲಿ ಶಶಾಂಕ್, ಒತ್ತಡ ತಾಳಲಾರದೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.