ಕೋವಿಡ್ ಸೊಂಕಿತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವಾರ್ಡ್ ಬಾಯ್ ಅರೆಸ್ಟ್..!
ಮಧ್ಯಪ್ರದೇಶ : ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ವಾರ್ಡ್ ಬಾಯ್ ಒಬ್ಬ 50 ವರ್ಷದ ಕೋವಿಡ್ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೊದಲ ಬಾರಿಗೆ ಅತ್ಯಾಚಾರಕ್ಕೆ ಯತ್ನಿಸಿ ವಿಫಲವಾಗಿದ್ದ ಬಳಿಕ ಮತ್ತೆ ಪ್ರಯತ್ನಿಸಿದಾಗ ಕುಟುಂಬಸ್ಥರ ಕಥಗೆ ಸಿಕ್ಕಿಬಿದ್ದಿದ್ದಾನೆ.
ಕೋವಿಡ್ ಸೋಂಕಿತ ಮಹಿಳೆಗೆ ಆಕ್ಸಿಜನ್ ಸಹಾಯದಿಂದ ಚಿಕಿತ್ಸೆ ಕೊಡಿಸುತ್ತಿದ್ದ ವೇಳೆ ಆಸ್ಪತ್ರೆಯ ವಾರ್ಡ್ ಇಂತಹ ನೀಚ ಕೆಲಸಕ್ಕೆ ಕೈಹಾಕಿದ್ದಾನೆ. ಸೋಂಕಿತ ಮಹಿಳೆಯ ದೂರಿನ ಅನ್ವಯ ಈತ 2 ಬಾರಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. 2ನೇ ಬಾರಿಗೆ ಯಾರೂ ಇಲ್ಲದ ಸಮಯ ನೋಡಿ ಬಂದಿರುವ ಆರೋಪಿ ವಿವೇಕ್ ಲೋಧಿ ಅತ್ಯಾಚಾರಕ್ಕೆ ಯತ್ನಿಸಿದ ವೇಳೆ ಅಲ್ಲಿಗೆ ಕುಟುಂಬಸ್ಥರು ಬಂದು ಎಮರ್ಜೆನ್ಸಿ ಅಲಾರ್ಮ್ ಹೊಡೆದಿದ್ದಾರೆ. ತಕ್ಷಣವೇ ಆಸ್ಪತ್ರೆ ಸಿಬ್ಬಂದಿಗಳು ಒಟ್ಟುಗೂಡಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಸಂತ್ರಸ್ತೆಯ ಪುತ್ರ ಕಂಪೂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ¥ದೂರು ದಾಖಲು ಮಾಡಿದ ಬಳಿಕ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಅಲ್ಲದೇ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ಧವೂ ಸಂತ್ರಸ್ತೆಯ ಕುಟುಂಬಸ್ಥರು ದೂರು ದಾಖಲು ಮಾಡಿದ್ದು, ವಿಚಾರಣೆ ಮುಂದುವರೆದಿದೆ.








